ಪ್ರಧಾನ ಮಂತ್ರಿಯವರ ಕಛೇರಿ

ಸೌದಿ ಅರೇಬಿಯಾದ ಯುವರಾಜ ಹಾಗೂ ಪ್ರಧಾನಮಂತ್ರಿಯೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ


ಇಬ್ಬರೂ ನಾಯಕರು ಹಲವಾರು ದ್ವಿಪಕ್ಷೀಯ, ಬಹುಪಕ್ಷೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆ ಪರಾಮರ್ಶೆ ನಡೆಸಿದರು

ಸುಡಾನ್ ನಿಂದ ಜೆಡ್ಡಾ ಮೂಲಕ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸೌದಿ ಅರೇಬಿಯಾ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧನ್ಯವಾದ ಅರ್ಪಿಸಿದರು.

ಮುಂಬರುವ ಹಜ್ ಯಾತ್ರೆಗೆ ಶುಭ ಕೋರಿದ ಪ್ರಧಾನಿ, 

ಪ್ರಸ್ತುತ ನಡೆಯುತ್ತಿರುವ ಜಿ-20 ಶೃಂಗಸಭೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಸೌದಿ ಅರೇಬಿಯಾದ ದೊರೆ ಮೊಹಮ್ಮದ್ ಬಿನ್ ಸಲ್ಮಾನ್

Posted On: 08 JUN 2023 10:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ  ಮೋದಿಯವರು ಇಂದು ಸೌದಿ ಅರೇಬಿಯಾದ ಪ್ರಧಾನ ಮಂತ್ರಿ ಮತ್ತು ಘನತೆವೆತ್ತ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು.

ಈ ಇಬ್ಬರೂ ನಾಯಕರು ದ್ವಿಪಕ್ಷೀಯ ಸಹಕಾರದ ಹಲವಾರು ವಿಷಯಗಳನ್ನು ಪರಿಶೀಲಿಸಿ, ಪರಸ್ಪರ ಹಿತಾಸಕ್ತಿಯ ವಿವಿಧ ಬಹುಪಕ್ಷೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಏಪ್ರಿಲ್ 2023ರಲ್ಲಿ ಸುಡಾನ್ ನಿಂದ ಜೆಡ್ಡಾ ಮೂಲಕ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸೌದಿ ಅರೇಬಿಯಾ ನೀಡಿದ ಅತ್ಯುತ್ತಮ ಬೆಂಬಲಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಧನ್ಯವಾದ ಅರ್ಪಿಸಿದರು. ಮುಂಬರುವ ಹಜ್ ಯಾತ್ರೆಗೂ ಕೂಡ ಅವರು ಶುಭ ಕೋರಿದರು.

ಜಿ-20 ಪ್ರೆಸಿಡೆನ್ಸಿಯ ಭಾಗವಾಗಿ ಭಾರತದ ಉಪಕ್ರಮಗಳಿಗೆ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರು ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಭಾರತಕ್ಕೆ ಭೇಟಿನೀಡಲು ಎದುರು ನೋಡುತ್ತಿರುವುದಾಗಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ತಿಳಿಸಿದರು. 
ಇಬ್ಬರೂ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಸಮ್ಮತಿಸಿದರು.

****



(Release ID: 1930932) Visitor Counter : 119