ಪ್ರಧಾನ ಮಂತ್ರಿಯವರ ಕಛೇರಿ
ದಕ್ಷಿಣ ಆಫ್ರಿಕಾ ಅಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ.
ಬ್ರಿಕ್ಸ್ ರಾಷ್ಟ್ರಗಳ ನಡುವೆ ಸಹಕಾರ, ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಉಭಯ ನಾಯಕರಿಂದ ಪ್ರಗತಿ ಪರಿಶೀಲನೆ.
ಆಫ್ರಿಕನ್ ನಾಯಕರ ಶಾಂತಿ ಪ್ರಕ್ರಿಯೆ ಕುರಿತು ಪ್ರಧಾನಮಂತ್ರಿಯವರಿಗೆ ಮಾಹಿತಿ ನೀಡಿದ ಅಧ್ಯಕ್ಷ ಶ್ರೀ ರಾಮಪೋಸ.
ಭಾರತದ ನಿರಂತರ ಮಾತುಕತೆ ಮತ್ತು ರಾಜತಾಂತ್ರಿಕತೆ ಕುರಿತಾದ ಕ್ರಮಗಳನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ
ಭಾರತದ ಜಿ-20 ಅಧ್ಯಕ್ಷತೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಅಧ್ಯಕ್ಷ ಶ್ರೀ ರಾಮಪೋಸ
Posted On:
10 JUN 2023 10:16PM by PIB Bengaluru
ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷ, ಗೌರವಾನ್ವಿತ ಶ್ರೀ ಮಾಟೆಮೆಲ ಸಿರಿಲ್ ರಾಮಪೋಸ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.
ಐತಿಹಾಸಿಕ ಮತ್ತು ಬಲವಾದ ನೆಲೆಯಲ್ಲಿ ಬೆಸೆದುಕೊಂಡಿರುವ ಜನರಿಂದ ಜನರ ನಡುವಿನ ಬಾಂಧವ್ಯ, ದ್ವಿಪಕ್ಷೀಯ ಸಹಕಾರ ಕುರಿತು ಉಭಯ ನಾಯಕರು ಪ್ರಗತಿ ಪರಿಶೀಲನೆ ನಡೆಸಿದರು. ಈ ವರ್ಷಾರಂಭದಲ್ಲಿ ಭಾರತಕ್ಕೆ 12 ಚೀತಾಗಳನ್ನು ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಅಧ್ಯಕ್ಷರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು.
ಪರಸ್ಪರ ಹಿತಾಸಕ್ತಿಯ ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳು, ಈ ವರ್ಷ ದಕ್ಷಿಣ ಆಫ್ರಿಕಾ ಸಾರಥ್ಯದಲ್ಲಿ ನಡೆಯುತ್ತಿರುವ ಬ್ರಿಕ್ಸ್ ರಾಷ್ಟ್ರಗಳ ಸಹಕಾರ ಕುರಿತಂತೆಯೂ ಅಭಿಪ್ರಾಯ ವಿನಿಯಮ ಮಾಡಿಕೊಂಡರು.
ಆಫ್ರಿಕನ್ ರಾಷ್ಟ್ರಗಳ ನಾಯಕರ ಶಾಂತಿ ಪ್ರಕ್ರಿಯೆ ಕುರಿತು ಅಧ್ಯಕ್ಷ ಶ್ರೀ ರಾಮಪೋಸ ಅವರು ಪ್ರಧಾನಮಂತ್ರಿ ಅವರಿಗೆ ಮಾಹಿತಿ ನೀಡಿದರು. ಉಕ್ರೇನ್ ನಲ್ಲಿ ದೀರ್ಘಕಾಲೀನ ಶಾಂತಿ ಮತ್ತು ಸ್ಥಿರತೆಯನ್ನು ಖಾತ್ರಿಪಡಿಸುವ ಗುರಿ ಹೊಂದಿರುವ ಎಲ್ಲಾ ಉಪಕ್ರಮಗಳಿಗೆ ಭಾರತ ಬೆಂಬಲ ನೀಡುತ್ತಿದ್ದು, ಮಾತುಕತೆ ಮತ್ತು ರಾಜತಾಂತ್ರಿಕ ಕ್ರಮಗಳನ್ನು ಮುಂದುವರೆಸುವುದಾಗಿ ಪ್ರಧಾನಮಂತ್ರಿ ಅವರು ಇದೇ ಸಂದರ್ಭದಲ್ಲಿ ಪುನರುಚ್ಚರಿಸಿದ್ದಾರೆ.
ಭಾರತದ ಜಿ20 ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಉಪಕ್ರಮಗಳಿಗೆ ಅಧ್ಯಕ್ಷ ಶ್ರೀ ರಾಮಪೋಸ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಭಾರತಕ್ಕೆ ಭೇಟಿ ನೀಡಲು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.
ಪರಸ್ಪರ ಸಂಪರ್ಕದಲ್ಲಿರಲು ಉಭಯ ನಾಯಕರು ಸಮ್ಮತಿಸಿದ್ದಾರೆ.
****
(Release ID: 1931652)
Visitor Counter : 131
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Telugu
,
Malayalam