ಪ್ರಧಾನ ಮಂತ್ರಿಯವರ ಕಛೇರಿ

ಜೂನ್ 13 ರಂದು ರೋಜ್ಗಾರ್ ಮೇಳದಡಿ, ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 70,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿರುವ ಪ್ರಧಾನಮಂತ್ರಿಯವರು

Posted On: 12 JUN 2023 4:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2023ರ ಜೂನ್ 13ರಂದು ಬೆಳಿಗ್ಗೆ 10:30ಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸುಮಾರು 70,000 ಹೊಸ ಅಭ್ಯರ್ಥಿಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ನೇಮಕಗೊಂಡವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 

ದೇಶಾದ್ಯಂತ 43 ಸ್ಥಳಗಳಲ್ಲಿ ರೋಜ್ಗಾರ್ ಮೇಳ ನಡೆಯಲಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರಿ ಇಲಾಖೆಗಳು ಮತ್ತು ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯಲಿವೆ. ಹಣಕಾಸು ಸಚಿವಾಲಯ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಕಂದಾಯ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಪರಮಾಣು ಶಕ್ತಿ ಇಲಾಖೆ, ರೈಲ್ವೆ ಸಚಿವಾಲಯ, ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ ಸೇರಿದಂತೆ ವಿವಿಧ ಇಲಾಖೆಗಳಿಗೆ ದೇಶಾದ್ಯಂತ ಆಯ್ಕೆಯಾದ ಹೊಸ ಅಭ್ಯರ್ಥಿಗಳು ಸೇರ್ಪಡೆಗೊಳ್ಳಲಿದ್ದಾರೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಕನಸನ್ನು ಈಡೇರಿಸುವ ನಿಟ್ಟಿನಲ್ಲಿ ಈ ರೋಜ್ಗಾರ್ ಮೇಳ ಒಂದು ಉತ್ತಮ ಉಪಕ್ರಮವಾಗಿದೆ. ರೋಜ್ಗಾರ್ ಮೇಳವು ಹೆಚ್ಚಿನ ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಯುವಕರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಹೆಚ್ಚಿನ ಅದ್ಬುತ ಅವಕಾಶಗಳನ್ನು ಒದಗಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೊಸದಾಗಿ ಸೇರ್ಪಡೆಗೊಂಡ ಅಭ್ಯರ್ಥಿಗಳು ಐಜಿಒಟಿ ಕರ್ಮಯೋಗಿ ಪೋರ್ಟಲ್ನಲ್ಲಿ ಆನ್ಲೈನ್ ಮಾಡ್ಯೂಲ್ ನ ಕರ್ಮಯೋಗಿ ಪ್ರಾರಂಭದ ಮೂಲಕ ತರಬೇತಿಯನ್ನು ಕೂಡಾ ಪಡೆಯುಬಹುದಾಗಿದೆ. ಈ ಪೋರ್ಟಲ್ನಲ್ಲಿ 400 ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್ ಗಳನ್ನು 'ಯಾವುದೇ ಸಾಧನದ ಮೂಲಕ' ಕಲಿಕೆಯಲು ಲಭ್ಯವಾಗುವಂತೆ ಅನುವು ಮಾಡಿಕೊಡಲಾಗಿದೆ.

****



(Release ID: 1931712) Visitor Counter : 100