ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ
ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳಲ್ಲಿನ ಪ್ರಗತಿಯ ಬಗ್ಗೆ ಎನ್ ಎಸ್ ಎ ಸುಲ್ಲಿವಾನ್ ಅವರು ಪ್ರಧಾನಮಂತ್ರಿಯವರಿಗೆ ವಿವರಿಸಿದರು
ಅಧಿಕೃತ ಭೇಟಿಯಲ್ಲಿ ಪ್ರಧಾನಮಂತ್ರಿಯವರನ್ನು ಸ್ವಾಗತಿಸಲು ಅಧ್ಯಕ್ಷ ಬೈಡೆನ್ ಅವರು ಎದುರು ನೋಡುತ್ತಿದ್ದಾರೆ ಎಂದು ತಿಳಿಸಿದ ಸುಲ್ಲಿವಾನ್
ಭಾರತ-ಯುಎಸ್ ಸಮಗ್ರ ಜಾಗತಿಕ ವ್ಯೂಹಾತ್ಮಕ ಪಾಲುದಾರಿಕೆಯಲ್ಲಿ ವೃದ್ಧಿಯಾಗುತ್ತಿರುವ ಹಾಗು ಇನ್ನಷ್ಟು ನಿಕಟವಾಗುತ್ತಿರುವ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಪ್ರಧಾನಿ
ಅಧ್ಯಕ್ಷ ಬೈಡೆನ್ ಅವರೊಂದಿಗೆ ಮಾತುಕತೆಯನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ ಪ್ರಧಾನ ಮಂತ್ರಿ
प्रविष्टि तिथि:
13 JUN 2023 8:02PM by PIB Bengaluru
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಘನತೆವೆತ್ತ ಶ್ರೀ ಜೇಕ್ ಸುಲ್ಲಿವಾನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳಲ್ಲಿ ಆಗಿರುವ ಪ್ರಗತಿಯ ಬಗ್ಗೆ ಎನ್ ಎಸ್ ಎ ಸುಲ್ಲಿವಾನ್ ಅವರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಅಮೆರಿಕ ಅಧ್ಯಕ್ಷ ಬೈಡನ್ ಅವರು ಅಧಿಕೃತ ಭೇಟಿಯಲ್ಲಿ ಪ್ರಧಾನ ಮಂತ್ರಿಯನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ ಎಂದೂ ಅವರು ತಿಳಿಸಿದರು.
ಭಾರತ ಮತ್ತು ಅಮೆರಿಕ ನಡುವೆ ಬೆಳೆಯುತ್ತಿರುವ ಮತ್ತು ನಿಕಟಗೊಳ್ಳುತ್ತಿರುವ ಸಮಗ್ರ ಜಾಗತಿಕ ವ್ಯೂಹಾತ್ಮಕ ಪಾಲುದಾರಿಕೆಯ ಬಗ್ಗೆ ಪ್ರಧಾನಮಂತ್ರಿಯವರು ತೃಪ್ತಿ ವ್ಯಕ್ತಪಡಿಸಿದರು.
ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಧ್ಯಕ್ಷ ಬೈಡೆನ್ ಅವರೊಂದಿಗೆ ಫಲಪ್ರದ ಭೇಟಿ ಮತ್ತು ಮಾತುಕತೆಯನ್ನು ಎದುರು ನೋಡುತ್ತಿರುವುದಾಗಿ ಪ್ರಧಾನಿ ಹೇಳಿದರು.
****
(रिलीज़ आईडी: 1932137)
आगंतुक पटल : 157
इस विज्ञप्ति को इन भाषाओं में पढ़ें:
Bengali
,
English
,
Urdu
,
Marathi
,
हिन्दी
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam