ಪ್ರಧಾನ ಮಂತ್ರಿಯವರ ಕಛೇರಿ

ಜಲ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲು ಪ್ರಧಾನಮಂತ್ರಿ ಕರೆ

Posted On: 17 JUN 2023 8:29PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಳೆನೀರು ಕೊಯ್ಲಿನ ಬಗ್ಗೆ ಜಾಗೃತಿ ಮೂಡಿಸಲು ಅರುಣಾಚಲ ಪ್ರದೇಶದ ಪಶ್ಚಿಮ ಕಾಮೆಂಗ್ ಜಿಲ್ಲೆಯ ನೆಹರು ಯುವ ಕೇಂದ್ರದ ಸ್ವಯಂಸೇವಕರು 'ನುಕ್ಕಡ್ ನಾಟಕ' ಪ್ರದರ್ಶಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ.

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೆಮಾ ಖಂಡು ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಇಂತಹ ಪ್ರಯತ್ನಗಳು ಶ್ಲಾಘನಾರ್ಹವಾಗಿವೆ ಮತ್ತು ಅವು ವಿವಿಧ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಬಹಳ ಪ್ರಭಾವ ಬೀರಲಿವೆ. ಜಲ ಸಂರಕ್ಷಣೆಯ ಸಂದೇಶವನ್ನು ಮತ್ತಷ್ಟು ಹೆಚ್ಚಿಸಲು ಭಾರತದಾದ್ಯಂತ ಹೆಚ್ಚಿನ ಜನರು ಇಂತಹ ಪ್ರಯತ್ನಗಳನ್ನು ಕೈಗೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ,’’ ಎಂದಿದ್ದಾರೆ.

***(Release ID: 1933346) Visitor Counter : 71