ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಸಾವಿಗೆ ಪ್ರಧಾನಿಯವರಿಂದ ಸಂತಾಪ


ಪಿ.ಎಂ.ಎನ್.ಆರ್.ಎಫ್. ನಿಂದ ಪರಿಹಾರ ಸಹಾಯ ಧನ ಘೋಷಣೆ

Posted On: 26 JUN 2023 12:12PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರು ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ಧನವನ್ನು ಘೋಷಿಸಿದರು.

ಪ್ರಧಾನಮಂತ್ರಿಯವರು;

"ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ಪರಿಹಾರ ಧನವಾಗಿ ನೀಡಲಾಗುವುದು" ಎಂದು ಟ್ವೀಟ್ ಮಾಡಿದ್ದಾರೆ.

***


(Release ID: 1935365) Visitor Counter : 140