ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯ ಹರ್ದ್ವಾರ್ ದುಬೆ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 26 JUN 2023 3:00PM by PIB Bengaluru

 ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯ ಹರ್ದ್ವಾರ್ ದುಬೆ ಅವರ ನಿಧನಕ್ಕೆ ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು:

"ಕಠಿಣ ಪರಿಶ್ರಮಿ ಬಿಜೆಪಿ ಸಂಸದ ಹರ್ದ್ವಾರ್ ದುಬೆ ಅವರ ನಿಧನ ವಾರ್ತೆ ಕೇಳಿ ತೀವ್ರ ದುಃಖವಾಗಿದೆ. ಅವರು ತಳಮಟ್ಟದ ನಾಯಕರಾಗಿದ್ದು, ಉತ್ತರ ಪ್ರದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ!" ಎಂದು ಬರೆದುಕೊಂಡಿದ್ದಾರೆ.

***


(ಪ್ರಕಟಣೆ ಐ.ಡಿ.: 1935379) ವಿಸಿಟರ್ ಕೌಂಟರ್ : 149