ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜುಲೈ 1 ರಂದು 17 ನೇ ಭಾರತೀಯ ಸಹಕಾರಿ ಕಾಂಗ್ರೆಸ್  ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ


ಥೀಮ್ - ‘ಅಮೃತ್ ಕಾಲ್: ವೈಬ್ರೆಂಟ್ ಭಾರತಕ್ಕಾಗಿ ಸಹಕಾರದ ಮೂಲಕ ಸಮೃದ್ಧಿ’

Posted On: 30 JUN 2023 3:09PM by PIB Bengaluru

ಅಂತಾರಾಷ್ಟ್ರೀಯ ಸಹಕಾರಿ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 1 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ 17 ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪ್ರಧಾನ ಮಂತ್ರಿಯವರ “ಸಹಕಾರ್ ಸೇ ಸಮೃದ್ಧಿ” ದೂರದೃಷ್ಟಿಯಡಿ ಕೇಂದ್ರ ಸರ್ಕಾರವು ದೇಶದಲ್ಲಿ ಸಹಕಾರ ಚಳವಳಿಯನ್ನು ಉತ್ತೇಜಿಸಲು ನಿರಂತರವಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಪ್ರಯತ್ನಕ್ಕೆ ಶಕ್ತಿ ತುಂಬಲು ಪ್ರತ್ಯೇಕ ಸಹಕಾರ ಸಚಿವಾಲಯವನ್ನು ರಚಿಸಲಾಗಿದೆ. ಕಾರ್ಯಕ್ರಮದಲ್ಲಿ ಪ್ರಧಾನಿಗಳು ಭಾಗವಹಿಸಿರುವುದು ಈ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ  ಹೆಜ್ಜೆಯಾಗಿದೆ.

17 ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಅನ್ನು ಜುಲೈ 1, 2  ರಂದು ಆಯೋಜಿಸಲಾಗಿದೆ. ಸಹಕಾರ ಚಳವಳಿಯಲ್ಲಿನ ವಿವಿಧ  ಆಯಾಮಗಳನ್ನು ಚರ್ಚಿಸುವುದು, ಅಳವಡಿಸಿಕೊಳ್ಳುತ್ತಿರುವ ಉತ್ತಮ ಅಭ್ಯಾಸಗಳ ಬಗ್ಗೆ ಪ್ರಚಾರ, ನಮ್ಮ ಮುಂದಿರುವ ಸವಾಲುಗಳನ್ನು ಎದುರಿಸುವುದು ಹೇಗೆ ಮತ್ತು ಭಾರತದ ಸಹಕಾರಿ ಚಳವಳಿಯ ಬೆಳವಣಿಗೆಗೆ ಭವಿಷ್ಯದ ನೀತಿ ನಿರ್ದೇಶನವನ್ನು ರೂಪಿಸುವುದು ಈ ಸಹಕಾರಿ ಕಾಂಗ್ರೆಸ್ ನ ಪ್ರಮುಖ ಉದ್ದೇಶವಾಗಿದೆ. 

“ಅಮೃತ್ ಕಾಲ: ವೈಬ್ರೆಂಟ್ ಭಾರತಕ್ಕಾಗಿ ಸಹಕಾರದ ಮೂಲಕ ಸಮೃದ್ಧಿ” ಮುಖ್ಯ ವಿಷಯದ ಮೇಲೆ ಏಳು ತಾಂತ್ರಿಕ ಸೆಷನ್ಗಳು ನಡೆಯಲಿವೆ. ಪ್ರಾಥಮಿಕ ಹಂತದಿಂದ ರಾಷ್ಟ್ರ ಮಟ್ಟದವರೆಗೆ ಸಹಕಾರಿ ಸಂಸ್ಥೆಗಳು, ಅಂತಾರಾಷ್ಟ್ರೀಯ ಸಹಕಾರಿ ಸಂಸ್ಥೆಗಳ ಪ್ರತಿನಿಧಿಗಳು, ಅಂತಾರಾಷ್ಟ್ರೀಯ ಸಹಕಾರ ಒಕ್ಕೂಟದ ಪ್ರತಿನಿಧಿಗಳು, ಸಚಿವಾಲಯಗಳು, ವಿಶ್ವವಿದ್ಯಾನಿಲಯಗಳು, ಪ್ರಖ್ಯಾತ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ 3600 ಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

****


(Release ID: 1936474) Visitor Counter : 139