ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ
ಪಿ.ಎಂ.ಎನ್.ಆರ್.ಎಫ್. ನಿಂದ ತಾತ್ಕಾಲಿಕ ಪರಿಹಾರ ಘೋಷಣೆ
Posted On:
01 JUL 2023 10:22AM by PIB Bengaluru
ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರು ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ತಾತ್ಕಾಲಿಕ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ಘೋಷಿಸಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿ ಅವರ ಕಚೇರಿ ಟ್ವೀಟ್ ಮಾಡಿದೆ.ಅದರಲ್ಲಿ;
"ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ವಿನಾಶಕಾರಿ ಬಸ್ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರಾಣ ಕಳೆದುಕೊಂಡವರ ಕುಟುಂಬಗಳ ದುಃಖದಲ್ಲಿ ನಾನೂ ಭಾಗಿ ಮತ್ತು ಅವರಿಗಾಗಿ ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ಥರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ.”
"ಬುಲ್ಧಾನಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ಬಂಧುಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ. ಹಾಗು ಗಾಯಗೊಂಡವರಿಗೆ 50,000 ರೂ.ತಾತ್ಕಾಲಿಕ ಪರಿಹಾರವನ್ನು ನೀಡಲಾಗುವುದು.” ಎಂದು ಹೇಳಿದ್ದಾರೆ.
***
(Release ID: 1936720)
Visitor Counter : 141
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam