ಉಪರಾಷ್ಟ್ರಪತಿಗಳ ಕಾರ್ಯಾಲಯ

ಉಪರಾಷ್ಟ್ರಪತಿ ಅವರು ಜುಲೈ 4 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ


ಐಐಟಿ ಗುವಾಹಟಿಯ 25 ನೇ ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ

Posted On: 02 JUL 2023 2:34PM by PIB Bengaluru

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಜುಲೈ 04, 2023 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ, ಹಾಗೂ ಅಲ್ಲಿ ಅವರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಗುವಾಹಟಿ ಇದರ 25 ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಗುವಾಹಟಿಯಲ್ಲಿ ಉಪರಾಷ್ಟ್ರಪತಿ ಅವರು ಕಾಮಾಖ್ಯ ದೇವಸ್ಥಾನಕ್ಕೆ ಭೇಟಿನೀಡಿ, ದೇವಿಯ ದರ್ಶನವನ್ನು ಪಡೆಯಲಿದ್ದಾರೆ ಮತ್ತು ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಲಿದ್ದಾರೆ.

ಐಐಟಿ ಗುವಾಹಟಿಯ ಕಾರ್ಯಕ್ರಮದ ಸಂದರ್ಭದಲ್ಲಿ ಉಪರಾಷ್ಟ್ರಪತಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

****



(Release ID: 1936935) Visitor Counter : 184