ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜೂನ್ 30 ರಂದು ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗಿ

Posted On: 28 JUN 2023 6:08PM by PIB Bengaluru

ವಿಶ್ವವಿದ್ಯಾನಿಲಯದ ತಂತ್ರಜ್ಞಾನ ವಿಭಾಗ, ಕಂಪ್ಯೂಟರ್ ಸೆಂಟರ್ ಮತ್ತು ಅಕಾಡೆಮಿಕ್ ಬ್ಲಾಕ್ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 30 ರಂದು ದೆಹಲಿ ವಿಶ್ವವಿದ್ಯಾನಿಲಯದ ಕ್ರೀಡಾ ಸಂಕೀರ್ಣದ ವಿವಿಧೋದ್ದೇಶ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಮಂತ್ರಿಯವರು ದೆಹಲಿ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೆಂಟರ್ ಮತ್ತು ತಂತ್ರಜ್ಞಾನ ವಿಭಾಗದ ಕಟ್ಟಡ ಮತ್ತು ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್ನಲ್ಲಿ ನಿರ್ಮಿಸಲಾಗುವ ಶೈಕ್ಷಣಿಕ ಬ್ಲಾಕ್ನ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯವನ್ನು ಮೇ 1, 1922 ರಂದು ಸ್ಥಾಪಿಸಲಾಗಿತ್ತು. ಕಳೆದ ನೂರು ವರ್ಷಗಳಲ್ಲಿ, ವಿಶ್ವವಿದ್ಯಾನಿಲಯವು ವ್ಯಾಪಕವಾಗಿ ಬೆಳೆದಿದೆ ಮತ್ತು ತನ್ನ ವಿಸ್ತಾರ ಹೆಚ್ಚಿಸಿಕೊಂಡಿದೆ. ಈಗ 86 ವಿಭಾಗಗಳು, 90 ಕಾಲೇಜುಗಳು, 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅಪಾರ ಕೊಡುಗೆ ನೀಡುತ್ತಿದೆ.

****


(Release ID: 1936941) Visitor Counter : 81