ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಬಾಹ್ಯಾಕಾಶ ಪಯಣದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯವನ್ನು ಬರೆಯುತ್ತದೆ: ಪ್ರಧಾನಮಂತ್ರಿ
Posted On:
14 JUL 2023 3:22PM by PIB Bengaluru
ಚಂದ್ರಯಾನ-3 ಉಡಾವಣೆಯಲ್ಲಿ ಭಾರತದ ವಿಜ್ಞಾನಿಗಳ ನಿರಂತರ ಸಮರ್ಪಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಟ್ವೀಟ್ ಸಂದೇಶವನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಈ ರೀತಿ ಟ್ವೀಟ್ ಮಾಡಿದ್ದಾರೆ;
“ಭಾರತದ ಬಾಹ್ಯಾಕಾಶ ಪಯಣದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯವನ್ನು ಬರೆಯುತ್ತದೆ. ಇದು ಪ್ರತಿ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಎತ್ತರಕ್ಕೆ ಏರಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅವರ ಚೈತನ್ಯ ಮತ್ತು ಜಾಣ್ಮೆಗಳಿಗೆ ನಾನು ವಂದಿಸುತ್ತೇನೆ! ”
*****
(Release ID: 1939507)
Visitor Counter : 146
Read this release in:
English
,
Urdu
,
Hindi
,
Nepali
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam