ಪ್ರಧಾನ ಮಂತ್ರಿಯವರ ಕಛೇರಿ

ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿ ಮೋದಿ ಸಭೆ

Posted On: 15 JUL 2023 6:54AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ಜುಲೈ 14ರಂದು ಪ್ಯಾರಿಸ್‌ನ ಎಲಿಸೀ ಅರಮನೆಯಲ್ಲಿ ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಜತೆ ನೇರ ಮತ್ತು ನಿಯೋಗ ಮಟ್ಟದ ಮಾತುಕತೆ ನಡೆಸಿದರು..

ರಕ್ಷಣೆ ಮತ್ತು ಭದ್ರತೆ, ನಾಗರಿಕ ಪರಮಾಣು, ವಿಜ್ಞಾನ ಮತ್ತು ತಂತ್ರಜ್ಞಾನ, ಇಂಧನ, ವ್ಯಾಪಾರ ಮತ್ತು ಹೂಡಿಕೆ, ಬಾಹ್ಯಾಕಾಶ, ಹವಾಮಾನ ಕ್ರಮಗಳು ಮತ್ತು ಜನರೊಂದಿಗಿನ ಜನರ ಸಂಬಂಧಗಳು ಸೇರಿದಂತೆ ದ್ವಿಪಕ್ಷೀಯ ಸಹಕಾರದ ವ್ಯಾಪಕ ಶ್ರೇಣಿಯ ಕ್ಷೇತ್ರಗಳ ಕುರಿತು ಇಬ್ಬರೂ ನಾಯಕರು ವ್ಯಾಪಕ ಚರ್ಚೆ ನಡೆಸಿದರು.

ಭಾರತದ ಜಿ-20 ಅಧ್ಯಕ್ಷತೆ, ಇಂಡೋ-ಪೆಸಿಫಿಕ್ ವಲಯದ ಬೆಳವಣಿಗೆಗಳು ಮತ್ತು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಚರ್ಚಿಸಿದರು.

"ಹೊರೈಸನ್ 2047: ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಭವಿಷ್ಯಗಳ  ಪಟ್ಟಿ ಮಾಡುವುದು" ಸೇರಿದಂತೆ ಮಹತ್ವಾಕಾಂಕ್ಷೆಯ ಫಲಿತಾಂಶದ ದಾಖಲೆಗಳನ್ನು ಅಳವಡಿಸಿಕೊಳ್ಳುವ ಕುರಿತು ಉಭಯ ನಾಯಕರು ಚರ್ಚಿಸಿದರು.

2023ಸೆಪ್ಟೆಂಬರ್  ನಲ್ಲಿ ಜಿ-20 ನಾಯಕರ ಶೃಂಗಸಭೆಗಾಗಿ ನವದೆಹಲಿಯಲ್ಲಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಸ್ವಾಗತಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. 

*****(Release ID: 1939829) Visitor Counter : 102