ಪ್ರಧಾನ ಮಂತ್ರಿಯವರ ಕಛೇರಿ

ಪಿಎಂ-ಮಿತ್ರ ಮೆಗಾ ಜವಳಿ ಪಾರ್ಕ್ ಗಳು ಉತ್ಪಾದಕತೆಯನ್ನು ಹೆಚ್ಚಿಸುತ್ತವೆ, ನಾವೀನ್ಯತೆಯನ್ನು ಉತ್ತೇಜಿಸುತ್ತವೆ ಮತ್ತು ಅನೇಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ: ಪ್ರಧಾನಿ

Posted On: 16 JUL 2023 6:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಳೆದ ಕೆಲವು ದಿನಗಳಲ್ಲಿ ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ 2 ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಗಳಿಗೆ ಶಂಕುಸ್ಥಾಪನೆ ನೆರವೇರಿಸಿರುವುದನ್ನು ಶ್ಲಾಘಿಸಿದ್ದಾರೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ

"ಕಳೆದ ಕೆಲವು ದಿನಗಳಲ್ಲಿ, 2 ಪಿಎಂ-ಮಿತ್ರ ಮೆಗಾ ಜವಳಿ ಪಾರ್ಕ್ ಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಈ ಪಾರ್ಕ್ ಗಳು  ಮಹಾರಾಷ್ಟ್ರದ ಅಮರಾವತಿ ಮತ್ತು ಗುಜರಾತಿನ  ನವಸಾರಿಯಲ್ಲಿ ತಲೆ ಎತ್ತಲಿವೆ. ಅವು ಉತ್ಪಾದಕತೆಯನ್ನು ಹೆಚ್ಚಿಸುತ್ತವೆ, ನಾವೀನ್ಯತೆಯನ್ನು ಉತ್ತೇಜಿಸುತ್ತವೆ ಮತ್ತು ಅನೇಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ. " ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ.

***



(Release ID: 1940075) Visitor Counter : 99