ಪ್ರಧಾನ ಮಂತ್ರಿಯವರ ಕಛೇರಿ

ವಶಪಡಿಸಿಕೊಳ್ಳಲಾದ 1,44,000 ಕೆಜಿ ತೂಕದ ಮಾದಕ ದ್ರವ್ಯಗಳನ್ನು ನಾಶಪಡಿಸಿದ ಐತಿಹಾಸಿಕ ಮೈಲಿಗಲ್ಲನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ

Posted On: 17 JUL 2023 8:57PM by PIB Bengaluru

ಇಂದು ವಶಪಡಿಸಿಕೊಳ್ಳಲಾದ 1,44,000 ಕೆ.ಜಿ ಮಾದಕ ದ್ರವ್ಯಗಳನ್ನು ನಾಶಪಡಿಸಿರುವುದರಿಂದ ಮಾದಕ ದ್ರವ್ಯಗಳನ್ನು ನಿರ್ಮೂಲನೆ ಮಾಡುವಲ್ಲಿ ಭಾರತವು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಇದರೊಂದಿಗೆ ಭಾರತವು ಕೇವಲ ಒಂದು ವರ್ಷದಲ್ಲಿ ರೂ.12,000 ಕೋಟಿ ಮೌಲ್ಯದ 1 ಮಿಲಿಯನ್ ಕೆಜಿ ತೂಕದ ಮಾದಕ ದ್ರವ್ಯಗಳನ್ನು ನಾಶಪಡಿಸಿದ ಅದ್ಭುತ ದಾಖಲೆಯನ್ನು ಸಾಧಿಸಿದೆ ಎಂದು ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಮಾದಕವಸ್ತು ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತಾದ ಪ್ರಾದೇಶಿಕ ಸಮ್ಮೇಳನದಲ್ಲಿ ಈ ಗಮನಾರ್ಹ ಸಾಧನೆಯನ್ನು ಸಾಧಿಸಲಾಗಿದೆ. ಭಾರತವನ್ನು ಮಾದಕ ದ್ರವ್ಯ ಮುಕ್ತ ದೇಶವಾಗಿ ಮಾಡುವ ಪ್ರಧಾನ ಮಂತ್ರಿಯವರ ಕನಸನ್ನು ಎಂಎಚ್ಎ ದೃಢವಾಗಿ, ಪಟ್ಟುಬಿಡದೆ ಅನುಸರಿಸುತ್ತಿದೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ.

ಇದಕ್ಕೆ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿಯವರು : 

"ಅತ್ಯದ್ಭುತ! ಭಾರತವನ್ನು ಮಾದಕ ದ್ರವ್ಯದ ಪಿಡುಗಿನಿಂದ ಮುಕ್ತಗೊಳಿಸುವ ನಮ್ಮ ಪ್ರಯತ್ನಗಳಿಗೆ ಈ ಕೆಲಸವು ಬಲವನ್ನು ನೀಡುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.

***



(Release ID: 1940500) Visitor Counter : 77