ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದ ಚಮೋಲಿಯಲ್ಲಿ ವಿದ್ಯುದಾಘಾತದಿಂದಾದ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ
प्रविष्टि तिथि:
19 JUL 2023 4:41PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ವಿದ್ಯುದಾಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಪ್ರಧಾನಮಂತ್ರಿಯವರು, ರಾಜ್ಯ ಸರ್ಕಾರದ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಪರಿಹಾರವನ್ನು ಒದಗಿಸುತ್ತಿದೆ ಎಂದು ತಿಳಿಸಿದರು.
ಪ್ರಧಾನಮಂತ್ರಿಯವರು ಕಾರ್ಯಾಲಯದ ಟ್ವೀಟ್ ಹೀಗಿದೆ:
“ಅತ್ಯಂತ ನೋವಿನ ಸಂಗತಿ! ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ಅಪಘಾತದಿಂದ ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುವುದರ ಜೊತೆಗೆ, ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯದಲ್ಲಿ ತೊಡಗಿದೆ: : ಪ್ರಧಾನಮಂತ್ರಿ @narendramodi “
*******
(रिलीज़ आईडी: 1940741)
आगंतुक पटल : 160
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam