ಪ್ರಧಾನ ಮಂತ್ರಿಯವರ ಕಛೇರಿ
ಕಾರ್ಗಿಲ್ ವಿಜಯ್ ದಿನದಂದು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರನ್ನು ಸ್ಮರಿಸಿದ ಪ್ರಧಾನ ಮಂತ್ರಿ
ಪ್ರಕಟಣಾ ದಿನಾಂಕ:
26 JUL 2023 9:01AM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ವಿಜಯ್ ದಿವಸ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ದೇಶಕ್ಕಾಗಿ ಹುತಾತ್ಮರಾದ ವೀರ ಹೃದಯಗಳ ವೀರಗಾಥೆಯನ್ನು ಜನತೆಯ ಮುಂದೆ ಮತ್ತೆ ತರುತ್ತದೆ. ಯುದ್ಧ ಸಂದರ್ಭದಲ್ಲಿ ಹುತಾತ್ಮರಾದ ಯೋಧರು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
“ಕಾರ್ಗಿಲ್ ವಿಜಯ್ ದಿವಸ್ ಭಾರತದ ಆ ಅದ್ಭುತ ಧೈರ್ಯಶಾಲಿಗಳ ವೀರಗಾಥೆಯನ್ನು ಮುನ್ನೆಲೆಗೆ ತರುತ್ತದೆ, ಅವರು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ. ಈ ವಿಶೇಷ ದಿನದಂದು, ನನ್ನ ಹೃದಯಾಂತರಾಳದಿಂದ ಅವರಿಗೆ ನಮಸ್ಕರಿಸುತ್ತೇನೆ. ಜೈ ಹಿಂದ್!" ಎಂದು ಬರೆದುಕೊಂಡಿದ್ದಾರೆ.
*******
(ಪ್ರಕಟಣೆ ಐ.ಡಿ.: 1942785)
ವಿಸಿಟರ್ ಕೌಂಟರ್ : 193
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam