ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಮಹಾರಾಷ್ಟ್ರದ ಶಹಾಪುರದಲ್ಲಿ ಸಂಭವಿಸಿದ ಭೀಕರ ಕ್ರೇನ್ ಕುಸಿತ ದುರ್ಘಟನೆಗೆ ಪ್ರಧಾನ ಮಂತ್ರಿ ಸಂತಾಪ
                    
                    
                        
ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಘೋಷಣೆ
                    
                
                
                    Posted On:
                01 AUG 2023 8:26AM by PIB Bengaluru
                
                
                
                
                
                
                ಮಹಾರಾಷ್ಟ್ರದ ಶಹಾಪುರದಲ್ಲಿ ಸಂಭವಿಸಿರುವ ಭೀಕರ ಕ್ರೇನ್ ಕುಸಿತ ದುರ್ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಪ್ರಧಾನಮಂತ್ರಿಗಳು ಪಿಎಂಎನ್‌ಆರ್‌ಎಫ್ ವತಿಯಿಂದ ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯವು ಟ್ವೀಟ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. "ಮಹಾರಾಷ್ಟ್ರದ ಶಹಾಪುರದಲ್ಲಿ ಸಂಭವಿಸಿದ ದುರ್ಘಟನೆಯಿಂದ ಮನಸ್ಸಿಗೆ ತೀವ್ರ ನೋವಾಗಿದೆ. ಮೃತರ ಕುಟುಂಬದವರಿಗೆ ನನ್ನ ತೀವ್ರ ಸಂತಾಪಗಳು. ಗಾಯಾಳುಗಳ ನೋವಿನಲ್ಲಿ ನಾನೂ ಭಾಗಿಯಾಗಿದ್ದು, ಶೀಘ್ರ  ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಘಟನಾ ಸ್ಥಳದಲ್ಲಿದ್ದು ಪರಿಹಾರ ಕಾರ್ಯಕ್ಕೆ ನೆರವಾಗಿದೆ. ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು, ಸ್ಪಂದನೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು,ʼʼ ಎಂದು ಭರವಸೆ ನೀಡಿದ್ದಾರೆ.
"ಹಾಗೆಯೇ ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪಿಎಂಎನ್‌ಆರ್‌ಎಫ್ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು,ʼʼ ಎಂದು ಘೋಷಿಸಿದ್ದಾರೆ.
***
                
                
                
                
                
                (Release ID: 1944637)
                Visitor Counter : 170
                
                
                
                    
                
                
                    
                
                Read this release in: 
                
                        
                        
                            Bengali 
                    
                        ,
                    
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Marathi 
                    
                        ,
                    
                        
                        
                            Manipuri 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam