ಪ್ರಧಾನ ಮಂತ್ರಿಯವರ ಕಛೇರಿ

ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಚಿನ್ನದ ಪದಕ ಗೆದ್ದುಕೊಟ್ಟ ಮಹಿಳಾ ತಂಡಕ್ಕೆ ಪ್ರಧಾನ ಮಂತ್ರಿಗಳಿಂದ ಅಭಿನಂದನೆ

Posted On: 05 AUG 2023 9:30AM by PIB Bengaluru

ಬರ್ಲಿನ್‌ನಲ್ಲಿ ನಡೆದ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಚಿನ್ನದ ಪದಕವನ್ನು ಗೆದ್ದು ತಂದುಕೊಟ್ಟ ಭಾರತದ ಮಹಿಳಾ ಸಂಯುಕ್ತ ತಂಡವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಟ್ವೀಟ್ ಮಾಡಿರುವ ಅವರು: "ಭಾರತಕ್ಕೆ ಇದೊಂದು ಹೆಮ್ಮೆಯ ಕ್ಷಣವಾಗಿದೆ. ಮಹಿಳೆಯರ ಸಂಯುಕ್ತ ತಂಡ ಅಸಾಧಾರಣ ಪ್ರದರ್ಶನ ನೀಡಿ ಬರ್ಲಿನ್‌ನಲ್ಲಿ ನಡೆದ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ವಿಜೇತರಿಗೆ ಅಭಿನಂದನೆಗಳು! ತಂಡದ ಸದಸ್ಯರ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಈ ಅತ್ಯುತ್ತಮ ಫಲಿತಾಂಶಕ್ಕೆ ಕಾರಣವಾಗಿದೆ.''ಎಂದು ಬರೆದುಕೊಂಡಿದ್ದಾರೆ.

 

***



(Release ID: 1946079) Visitor Counter : 97