ಉಪರಾಷ್ಟ್ರಪತಿಗಳ ಕಾರ್ಯಾಲಯ
ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಮಾದರಿ ಪ್ರದರ್ಶನ ಶ್ಲಾಘಿಸಿದ ಉಪರಾಷ್ಟ್ರಪತಿ
"ಭಾರತೀಯ ಕ್ರೀಡಾಪಟುಗಳ ಅಸಾಧಾರಣ ಪ್ರದರ್ಶನವು ರಾಷ್ಟ್ರಕ್ಕೆ ಸ್ಫೂರ್ತಿ ಮತ್ತು ಪ್ರೇರಣೆ ನೀಡುತ್ತದೆ: ಉಪರಾಷ್ಟ್ರಪತಿ ಹೇಳಿಕೆ
ಅದಿತಿ ಗೋಪಿಚಂದ್ ಸ್ವಾಮಿ ಅವರನ್ನು ಶ್ಲಾಘಿಸಿದ ಉಪರಾಷ್ಟ್ರಪತಿ: ವೈಯಕ್ತಿಕ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಅತ್ಯಂತ ಕಿರಿಯ ಬಿಲ್ಲುಗಾರ
"ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಮಹಿಳಾ ಬಿಲ್ಲುಗಾರರು ಇತಿಹಾಸ ಬರೆದಿದ್ದಾರೆ" – ಉಪರಾಷ್ಟ್ರಪತಿ
Posted On:
07 AUG 2023 1:24PM by PIB Bengaluru
ಜರ್ಮನಿಯ ಬರ್ಲಿನ್‌ನಲ್ಲಿಂದು ನಡೆದ ವಿಶ್ವ ಬಿಲ್ಲುಗಾರಿಕೆ(ಆರ್ಚರಿ) ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ತೋರಿದ ಅಸಾಧಾರಣ ಮತ್ತು ಅನುಕರಣೀಯ ಪ್ರದರ್ಶನವನ್ನು ರಾಜ್ಯಸಭೆ ಸಭಾಪತಿ ಮತ್ತು ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಮೇಲ್ಮನೆಯಲ್ಲಿ ಶ್ಲಾಘಿಸಿದರು. ಕ್ರೀಡಾಪಟುಗಳ ಅಮೋಘ ಪ್ರದರ್ಶನವು ದೇಶಕ್ಕೆ ಸ್ಫೂರ್ತಿ ಮತ್ತು ಪ್ರೇರಣೆ ನೀಡುತ್ತದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯಸಭೆಯಲ್ಲಿ ಸದನದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ ಶ್ರೀ ಧನಕರ್ ಅವರು, ಭಾರತದ ಮಹಿಳಾ ಬಿಲ್ಲುಗಾರರು ತಮ್ಮ ಅದ್ಭುತ ಪ್ರದರ್ಶನದಿಂದ ಇತಿಹಾಸ ಬರೆದಿದ್ದಾರೆ ಎಂದು ಶ್ಲಾಘಿಸಿದರು.
ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಅತ್ಯುತ್ತಮ ಪ್ರದರ್ಶನವನ್ನು ಶ್ಲಾಘಿಸಿದ ಉಪರಾಷ್ಟ್ರಪತಿ, ಅವರ ಸಾಧನೆಗಳು ಕ್ರೀಡಾ ಕ್ಷೇತ್ರದಲ್ಲಿ ನಮ್ಮ ತ್ವರಿತ ಪ್ರಗತಿಯನ್ನು ಪ್ರತಿಬಿಂಬಿಸುತ್ತಿದೆ. ನಮ್ಮ ಕ್ರೀಡಾಪಟುಗಳ ಅಚಲವಾದ ಗಮನ, ಕಠಿಣ ಪರಿಶ್ರಮ ಮತ್ತು ಪೂರ್ಣ ಹೃದಯದ ಸಮರ್ಪಣೆಗೆ ಸಾಕ್ಷಿಯಾಗಿದೆ. ಇದು ಸಕಾರಾತ್ಮಕ ಸರ್ಕಾರದ ಉಪಕ್ರಮಗಳು ಮತ್ತು ನೀತಿಗಳಿಂದ ಸಾಧ್ಯವಾಗಿದೆ ಎಂದು ಅವರು ಹೇಳಿದರು.
17 ವರ್ಷದ ಅದಿತಿ ಗೋಪಿಚಂದ್ ಸ್ವಾಮಿ ಅವರು ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ವೈಯಕ್ತಿಕ ವಿಶ್ವ ಪ್ರಶಸ್ತಿ ಗಳಿಸಿದ್ದಾರೆ. ಈ ಪ್ರಶಸ್ತಿ ಗೆದ್ದ ವಿಶ್ವದ ಅತ್ಯಂತ ಕಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು ಎಂದು ರಾಜ್ಯಸಭಾ ಸಭಾಪತಿ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಓಜಸ್ ಪ್ರವೀಣ್ ಡಿಯೋತಲೆ ಅವರನ್ನು ಸಹ ಉಪರಾಷ್ಟ್ರಪತಿ ಶ್ಲಾಘಿಸಿದರು. ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಅಂತಹ ಪ್ರಶಸ್ತಿ ಪಡೆದ ಮೊದಲ ಭಾರತೀಯ ಪುರುಷ ಬಿಲ್ಲುಗಾರ ಎನಿಸಿಕೊಂಡಿದ್ದಾರೆ.
ಮತ್ತೊಬ್ಬ ಮಹಿಳಾ ಬಿಲ್ಲುಗಾರ್ತಿ ಜ್ಯೋತಿ ಸುರೇಖಾ ವೆನ್ನಂ ಅವರುಮಹಿಳೆಯರ ವೈಯಕ್ತಿಕ ಮಿಶ್ರ ವಿಭಾಗದ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದರೆ, ಜ್ಯೋತಿ ವೆನ್ನಂ, ಪರ್ನೀತ್ ಕೌರ್ ಮತ್ತು ಅದಿತಿ ಗೋಪಿಚಂದ್ ಸ್ವಾಮಿ ಅವರ ತಂಡವು ಮಹಿಳಾ ಮಿಶ್ರ ತಂಡ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಚಿನ್ನದ ಪದಕ ಗಳಿಸಿದೆ.
ಬಿಲ್ಲುಗಾರಿಕೆ ಕ್ರೀಡಾಪಟುಗಳ ಮುಂದಿನ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದ ಸಭಾಪತಿ, ಅವರು ತಮ್ಮ ಸಾಧನೆಗಳ ಮೂಲಕ ಮತ್ತಷ್ಟು ಪ್ರಶಸ್ತಿಗಳನ್ನು ತಂದು ಇಡೀ ರಾಷ್ಟ್ರವೇ ಹೆಮ್ಮೆ ಪಡುವಂತೆ ಮಾಡಲಿ ಎಂದು ಶುಭ ಹಾರೈಸಿದರು.
ಉಪರಾಷ್ಟ್ರಪತಿ ಅವರ ಹೇಳಿಕೆಯ ಸಂಪೂರ್ಣ ವಿವರ ಇಲ್ಲಿದೆ -
“ಗೌರವಾನ್ವಿತ ಸದಸ್ಯರೆ, ಇದು ನಮಗೆ ಅಪಾರ ಹೆಮ್ಮೆಯ ಕ್ಷಣ. ನಮ್ಮ ಬಿಲ್ಲುಗಾರಿಕೆ ಕ್ರೀಡಾಪಟುಗಳು ವಿಶೇಷವಾಗಿ ಮಹಿಳಾ ಬಿಲ್ಲುಗಾರರು, ಜರ್ಮನಿಯ ಬರ್ಲಿನ್‌ನಲ್ಲಿ ನಡೆದ 2023ರ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಇತಿಹಾಸ ಬರೆದಿದ್ದಾರೆ.
17 ವರ್ಷದ ಅದಿತಿ ಗೋಪಿಚಂದ್ ಸ್ವಾಮಿ ಅವರು ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ವೈಯಕ್ತಿಕ ವಿಶ್ವ ಪ್ರಶಸ್ತಿ ಗಳಿಸಿದ್ದಾರೆ. ಈ ಪ್ರಶಸ್ತಿ ಗೆದ್ದ ವಿಶ್ವದ ಅತ್ಯಂತ ಕಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಓಜಸ್ ಪ್ರವೀಣ್ ಡಿಯೋತಲೆ ವರು ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದರು. ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಅಂತಹ ಪ್ರಶಸ್ತಿ ಪಡೆದ ಮೊದಲ ಭಾರತೀಯ ಪುರುಷ ಬಿಲ್ಲುಗಾರ ಎನಿಸಿಕೊಂಡಿದ್ದಾರೆ.
ಮಹಿಳೆಯರ ವೈಯಕ್ತಿಕ ಮಿಶ್ರ ಸ್ಪರ್ಧೆಯಲ್ಲಿ ಜ್ಯೋತಿ ಸುರೇಖಾ ವೆನ್ನಂ ಕಂಚಿನ ಪದಕ ಗೆದ್ದರೆ, ಜ್ಯೋತಿ ವೆನ್ನಂ, ಪರ್ನೀತ್ ಕೌರ್ ಮತ್ತು ಅದಿತಿ ಗೋಪಿಚಂದ್ ಸ್ವಾಮಿ ಅವರ ತಂಡವು ಮಹಿಳೆಯರ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ.
ಇದು ವಿಶ್ವ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿದೆ. ಅವರ ಸಾಧನೆಗಳು ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಕ್ಷಿಪ್ರ ಪ್ರಗತಿಯನ್ನು ಪ್ರತಿಬಿಂಬಿಸುತ್ತಿದೆ. ನಮ್ಮ ಕ್ರೀಡಾಪಟುಗಳ ಅಚಲ ಗಮನ, ಕಠಿಣ ಪರಿಶ್ರಮ ಮತ್ತು ಪೂರ್ಣ ಹೃದಯದ ಸಮರ್ಪಣೆಗೆ ಇದು ಸಾಕ್ಷಿಯಾಗಿದೆ. ಇದು ಸಕಾರಾತ್ಮಕ ಸರ್ಕಾರದ ಉಪಕ್ರಮಗಳು ಮತ್ತು ನೀತಿಗಳಿಂದ ಸಾಧ್ಯವಾಗಿದೆ.
ಅವರ ಅಸಾಧಾರಣ ಮತ್ತು ಅನುಕರಣೀಯ ಪ್ರದರ್ಶನವು ರಾಷ್ಟ್ರಕ್ಕೆ ಸ್ಫೂರ್ತಿ ಮತ್ತು ಪ್ರೇರಣೆ ನೀಡುತ್ತದೆ.
ಸದನದ ಪರವಾಗಿ ಮತ್ತು ನನ್ನ ಪರವಾಗಿ ನಾನು ಬಿಲ್ಲುಗಾರಿಕೆ ಕ್ರೀಡಾಪಟುಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರ ಮುಂದಿನ ಪ್ರಯತ್ನಗಳಲ್ಲಿ ಬಹುದೊಡ್ಡ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ.
ಅವರು ತಮ್ಮ ಅಮೋಘ ಸಾಧನೆಗಳ ಮೂಲಕ ಪ್ರಶಸ್ತಿಗಳನ್ನು ತರುತ್ತಾರೆ, ಇಡೀ ರಾಷ್ಟ್ರವೇ ಹೆಮ್ಮೆಪಡುವಂತೆ ಮಾಡುತ್ತಾರೆ ಎಂದು ನಾವು ಭಾವಿಸುತ್ತೇವೆ.
*****
(Release ID: 1946426)
Visitor Counter : 153