ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತ ಬಿಟ್ಟು ತೊಲಗಿ(ಕ್ವಿಟ್ ಇಂಡಿಯಾ) ಚಳವಳಿಯಲ್ಲಿ ಭಾಗವಹಿಸಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರಧಾನಮಂತ್ರಿಯವರು ಗೌರವ ನಮನ ಸಲ್ಲಿಸಿದರು

प्रविष्टि तिथि: 09 AUG 2023 11:50AM by PIB Bengaluru

ಭಾರತ ಬಿಟ್ಟು ತೊಲಗಿ(ಕ್ವಿಟ್ ಇಂಡಿಯಾ) ಚಳವಳಿಯಲ್ಲಿ ಭಾಗವಹಿಸಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಗಾಂಧೀಜಿಯವರ ನೇತೃತ್ವದಲ್ಲಿ ಭಾರತ ಬಿಟ್ಟು ತೊಲಗಿ ಚಳುವಳಿಯು ವಸಾಹತುಶಾಹಿ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೊ ಸಂದೇಶದ ಮೂಲಕ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;

“ಭಾರತ ಬಿಟ್ಟು ತೊಲಗಿ(ಕ್ವಿಟ್ ಇಂಡಿಯಾ) ಚಳವಳಿಯಲ್ಲಿ ಭಾಗವಹಿಸಿದ ಮಹನೀಯರಿಗೆ ಗೌರವ ನಮನಗಳು. ಗಾಂಧೀಜಿಯವರ ನೇತೃತ್ವದಲ್ಲಿ ಭಾರತವನ್ನು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತಗೊಳಿಸುವಲ್ಲಿ ಈ ಚಳುವಳಿ ಪ್ರಮುಖ ಪಾತ್ರ ವಹಿಸಿತು. ಇಂದು ಭಾರತ ಒಂದೇ ಧ್ವನಿಯಲ್ಲಿ ಹೇಳುತ್ತಿದೆ:

ಭ್ರಷ್ಟಾಚಾರ ಭಾರತ ಬಿಟ್ಟು ತೊಲಗಲಿ(ಕ್ವಿಟ್ ಇಂಡಿಯಾ),

ಪರಂಪರೆಯ ರಾಜಕಾರಣವು ಭಾರತ ಬಿಟ್ಟು ತೊಲಗಲಿ(ಕ್ವಿಟ್ ಇಂಡಿಯಾ),

ತುಷ್ಟೀಕರಣವು ಭಾರತ ಬಿಟ್ಟು ತೊಲಗಲಿ(ಕ್ವಿಟ್ ಇಂಡಿಯಾ)”

********


(रिलीज़ आईडी: 1947075) आगंतुक पटल : 477
इस विज्ञप्ति को इन भाषाओं में पढ़ें: Gujarati , English , Urdu , हिन्दी , Marathi , Bengali , Manipuri , Assamese , Punjabi , Odia , Tamil , Telugu , Malayalam