ಪ್ರಧಾನ ಮಂತ್ರಿಯವರ ಕಛೇರಿ
ಅಹಮದಾಬಾದ್‌ನ ಬವ್ಲಾ-ಬಗೋದರಾ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಮೃತರಿಗೆ ಪ್ರಧಾನಿ ಮೋದಿ ಸಂತಾಪ
ಪಿಎಂಎನ್ಆರ್ ಎಫ್ ನಿಂದ ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ
Posted On:
11 AUG 2023 3:34PM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತಿನ ಅಹಮದಾಬಾದ್‌ನ ಬವ್ಲಾ-ಬಗೋದರ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(PMNRF)ಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿ;
''ಅಹಮದಾಬಾದ್ ಜಿಲ್ಲೆಯ ಬವ್ಲಾ-ಬಗೋದರ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಕೇಳಿ ನೋವಾಗಿದೆ. ಮೃತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಸ್ಥಳೀಯ ಆಡಳಿತ ಎಲ್ಲ ರೀತಿಯ ನೆರವು ನೀಡುತ್ತಿದೆ.
ಪಿಎಂಎನ್ ಆರ್ ಎಫ್ ನಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
******
(Release ID: 1947812)
Visitor Counter : 132
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam