ಪ್ರಧಾನ ಮಂತ್ರಿಯವರ ಕಛೇರಿ
ಭಾರತವು ಮಣಿಪುರದ ಜನರೊಂದಿಗೆ ನಿಲ್ಲುತ್ತದೆ: ಪ್ರಧಾನಮಂತ್ರಿ
Posted On:
15 AUG 2023 8:42AM by PIB Bengaluru
ಇಂದು 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಯಿಂದ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತವು ಮಣಿಪುರದ ಜನರೊಂದಿಗೆ ನಿಲ್ಲುತ್ತದೆ ಮತ್ತು ಅಲ್ಲಿನ ಸಮಸ್ಯೆಗಳಿಗೆ ಶಾಂತಿಯುತ ಪರಿಹಾರ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮಣಿಪುರದಲ್ಲಿ ಅಶಾಂತಿ ಮತ್ತು ಹಿಂಸಾಚಾರದ ಅವಧಿಯಲ್ಲಿ ಮಹಿಳೆಯರ ಘನತೆಯ ಮೇಲಿನ ದಾಳಿಯ ಸುದ್ದಿಗಳಿವೆ, ಮಣಿಪುರದ ಜನರು ಕೆಲವು ಸಮಯದವರೆಗೆ ಶಾಂತಿಯನ್ನು ಕಾಪಾಡಿಕೊಳ್ಳುತ್ತಿದ್ದಾರೆ ಮತ್ತು ಶಾಂತಿ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಪ್ರಧಾನಿ ಕೋರಿದ್ದಾರೆ. ಜತೆಗೆ "ಆ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿವೆ ಮತ್ತು ಅದನ್ನು ಮುಂದುವರಿಸುತ್ತವೆ," ಎಂದು ಅವರು ಹೇಳಿದ್ದಾರೆ.
****
(Release ID: 1949116)
Visitor Counter : 126
Read this release in:
Assamese
,
English
,
Khasi
,
Urdu
,
Marathi
,
Hindi
,
Nepali
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam