ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ: ಪ್ರಧಾನಿ ಶ್ಲಾಘನೆ

ಪ್ರಕಟಣಾ ದಿನಾಂಕ: 18 AUG 2023 1:10PM by PIB Bengaluru

ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್‌ನಲ್ಲಿರುವ ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ನಮ್ಮ ರಾಷ್ಟ್ರದ ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

"ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟನೆಯಾಗಿರುವುದನ್ನು ನೋಡಲು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯಾಗುತ್ತದೆ. ಇದು ನಮ್ಮ ರಾಷ್ಟ್ರದ ಆವಿಷ್ಕಾರ ಮತ್ತು ಪ್ರಗತಿಗೆ ಸಾಕ್ಷಿಯಾಗುವುದರ ಜೊತೆಗೆ ಸ್ವಾವಲಂಬಿ ಭಾರತದ ಮನೋಭಾವ ಹೊಂದಿದೆ. ಅಂಚೆ ಕಚೇರಿ ಪೂರ್ಣಗೊಳಿಸಲು ಶ್ರಮಿಸಿದ ಎಲ್ಲರಿಗೂ ಈ ಸಂದರ್ಭದಲ್ಲಿ ಅಭಿನಂದನೆಗಳು'' ಎಂದು ಬರೆದುಕೊಂಡಿದ್ದಾರೆ.

***


(ಪ್ರಕಟಣೆ ಐ.ಡಿ.: 1950091) ವಿಸಿಟರ್ ಕೌಂಟರ್ : 171