ರಾಷ್ಟ್ರಪತಿಗಳ ಕಾರ್ಯಾಲಯ
ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದ ಕೇಂದ್ರೀಯ ಜಲ ಎಂಜಿನಿಯರ್ ಸೇವೆಗಳ ಅಧಿಕಾರಿಗಳು
ಜಲ ಸುರಕ್ಷತೆ ಮತ್ತು ಆರ್ಥಿಕ ಪ್ರಗತಿಗೆ ಪರಿಣಾಮಕಾರಿ ಜಲ ನಿರ್ವಹಣೆ ಅತ್ಯಗತ್ಯ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು
Posted On:
21 AUG 2023 1:47PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಕೇಂದ್ರೀಯ ಜಲ ಎಂಜಿನಿಯರಿಂಗ್ ಸೇವೆಗಳ ಅಧಿಕಾರಿಗಳು ಇಂದು (ಆಗಸ್ಟ್ 21,2023) ಭೇಟಿ ಮಾಡಿದ್ದರು.
ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ನೀರು ಜೀವನಕ್ಕೆ ಮೂಲಭೂತ ಅವಶ್ಯಕತೆಯಾಗಿದೆ ಮತ್ತು ಎಲ್ಲ ಪೀಳಿಗೆಗಳಿಗೂ ಜಲ ಸಂಪನ್ಮೂಲಗಳ ನಿರ್ವಹಣೆ ಅತ್ಯಂತ ಪ್ರಮುಖ ಮತ್ತು ಸವಾಲಿನ ಕೆಲಸವಾಗಿದೆ ಎಂದರು. ಎಂಜಿನಿಯರಿಂಗ್ ಪರಿಹಾರಗಳನ್ನು ಒದಗಿಸುವ ಮೂಲಕ ನೀರಿನ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಜಲ ಎಂಜನಿಯರ್ ಗಳ ಸೇವೆಯ ಅಧಿಕಾರಿಗಳ ಕೊಡುಗೆ ಅನನ್ಯ, ಇದರಿಂದ ದೇಶ ನೈಸರ್ಗಿಕ ಮತ್ತು ಮಾನವ ನಿರ್ಮಿತ ಜಲ ಬಿಕ್ಕಟ್ಟುಗಳನ್ನು ಎದುರಿಸುವಲ್ಲಿ ಹೆಚ್ಚಿನ ಸ್ಥಿತಿಸ್ಥಾಪಕತ್ವ ತಂದುಕೊಟ್ಟಿದೆ ಎಂದರು.
ಜಲ ಸುರಕ್ಷತೆ ಮತ್ತು ಆರ್ಥಿಕ ಪ್ರಗತಿಗೆ ಜಲಸಂಪನ್ಮೂಲಗಳ ಸುಸ್ಥಿರ ಅಭಿವೃದ್ಧಿ ಮತ್ತು ಪರಿಣಾಮಕಾರಿ ಜಲ ನಿರ್ವಹಣೆ ಅತ್ಯಗತ್ಯ ಎಂದು ರಾಷ್ಟ್ರಪತಿ ಹೇಳಿದರು. ಹೆಚ್ಚಿನ ಆರ್ಥಿಕ ಬೆಳವಣಿಗೆ ಮತ್ತು ಹೆಚ್ಚುತ್ತಿರುವ ನಗರೀಕರಣ ಹಾಗೂ ಅಭಿವೃದ್ಧಿಯೊಂದಿಗೆ ಲಭ್ಯವಿರುವ ಸಂಪನ್ಮೂಲಗಳ ಸಮರ್ಪಕ ಬಳಕೆ ಅಗತ್ಯವಿದೆ ಎಂದು ಅವರು ಹೇಳಿದರು. ಬದಲಾಗುತ್ತಿರುವ ಹವಾಮಾನ ಪ್ರವೃತ್ತಿಯು ಈಗಾಗಲೇ ನೀರಿನ ವಲಯದ ಮೇಲೆ ಪರಿಣಾಮ ಬೀರಲಾರಂಭಿಸಿದೆ ಮತ್ತು ನಮ್ಮ ದೇಶವು ವಿವಿಧ ಪ್ರದೇಶಗಳಲ್ಲಿ ವಿಭಿನ್ನ ಭೌಗೋಳಿಕ ಹಮಾವಾನ ಪರಿಸ್ಥಿತಿಗಳನ್ನು ಹೊಂದಿದೆ ಎಂದು ಅವರು ಹೇಳಿದರು. ಈಗಾಗಲೇ ಇರುವ ಹಾಗೂ ಮುಂಬರುವ ಸವಾಲುಗಳನಮ್ನು ಎದುರಿಸಲು ಸಮಗ್ರ ವಿಧಾನವನ್ನು ಅಳವಡಿಸಿಕೊಳ್ಳುವಲ್ಲಿ ಕೇಂದ್ರ ಜಲ ಎಂಜನಿಯರಿಂಗ್ ಸೇವೆಗಳ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇದೆ ಎಂದು ಅವರು ಪ್ರಮುಖವಾಗಿ ಪ್ರತಿಪಾದಿಸಿದರು. ಸುಸ್ಥಿರ ರೀತಿಯಲ್ಲಿ ಜಲಸಂಪನ್ಮೂಲಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಒತ್ತು ನೀಡುವಂತೆ ಅವರು ಸಲಹೆ ನೀಡಿದರು.
http://ರಾಷ್ಟ್ರಪತಿಯವರ ಭಾಷಣಕ್ಕೆ ಇಲ್ಲಿ ಕ್ಲಿಕ್ ಮಾಡಿ.
***
(Release ID: 1950798)
Visitor Counter : 133