ಪ್ರಧಾನ ಮಂತ್ರಿಯವರ ಕಛೇರಿ
ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಗೆ ಪ್ರಧಾನಮಂತ್ರಿ ಅವರ ಭೇಟಿ (2023 ರ ಆಗಸ್ಟ್ 22 - 25)
Posted On:
19 AUG 2023 11:30AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಮಾತಮೇಳ ಸಿರಿಲ್ ರಾಮಫೋಸಾ ಅವರ ಆಹ್ವಾನದ ಮೇರೆಗೆ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು 2023ರ ಆಗಸ್ಟ್ 22ರಿಂದ 24ರವರೆಗೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ಗೆ ಭೇಟಿ ನೀಡಲಿದ್ದಾರೆ.
ಇದು 2019 ರ ನಂತರ ಮೊದಲ ವೈಯಕ್ತಿಕ ಬ್ರಿಕ್ಸ್ ಶೃಂಗಸಭೆಯಾಗಿದೆ. ಗುಂಪು ಪ್ರಾರಂಭಿಸಿದ ಉಪಕ್ರಮಗಳ ಪ್ರಗತಿಯನ್ನು ಪರಿಶೀಲಿಸಲು ಮತ್ತು ಭವಿಷ್ಯದ ಚಟುವಟಿಕೆಯ ಕ್ಷೇತ್ರಗಳನ್ನು ಗುರುತಿಸಲು ಶೃಂಗಸಭೆ ಅವಕಾಶವನ್ನು ಒದಗಿಸುತ್ತದೆ.
ಬ್ರಿಕ್ಸ್ ಶೃಂಗಸಭೆಯ ನಂತರ ಆಯೋಜಿಸಲಾಗಿರುವ " ಬ್ರಿಕ್ಸ್ - ಆಫ್ರಿಕಾ ಔಟ್ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಸಂವಾದ" ಎಂಬ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ, ಇದರಲ್ಲಿ ದಕ್ಷಿಣ ಆಫ್ರಿಕಾ ಆಹ್ವಾನಿಸಿದ ಇತರ ದೇಶಗಳು ಸೇರಿವೆ.
ತಮ್ಮ ಭೇಟಿಯ ವೇಳೆ ಪ್ರಧಾನಮಂತ್ರಿ ಅವರು ಜೋಹಾನ್ಸ್ ಬರ್ಗ್ ನಲ್ಲಿ ಉಪಸ್ಥಿತರಿರುವ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
ದಕ್ಷಿಣ ಆಫ್ರಿಕಾ ಭೇಟಿಯ ನಂತರ, ಪ್ರಧಾನಮಂತ್ರಿ ಅವರು ಗ್ರೀಸ್ ಪ್ರಧಾನಿ ಗೌರವಾನ್ವಿತ ಶ್ರೀ ಕೈರಿಯಾಕೋಸ್ ಮಿಟ್ಸೊಟಾಕಿಸ್ ಅವರ ಆಹ್ವಾನದ ಮೇರೆಗೆ 2023 ರ ಆಗಸ್ಟ್ 25 ರಂದು ಗ್ರೀಸ್ ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಕಳೆದ 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಗ್ರೀಸ್ ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಭಾರತ ಮತ್ತು ಗ್ರೀಸ್ ನಾಗರಿಕ ಸಂಬಂಧಗಳನ್ನು ಹೊಂದಿವೆ, ಇದು ಇತ್ತೀಚಿನ ವರ್ಷಗಳಲ್ಲಿ ಕಡಲ ಸಾರಿಗೆ, ರಕ್ಷಣೆ, ವ್ಯಾಪಾರ ಮತ್ತು ಹೂಡಿಕೆಗಳು ಮತ್ತು ಜನರ ನಡುವಿನ ಸಂಬಂಧಗಳಂತಹ ಕ್ಷೇತ್ರಗಳಲ್ಲಿನ ಸಹಕಾರದ ಮೂಲಕ ಬಲಗೊಂಡಿದೆ. ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿ ಮಿಟ್ಸೊಟಾಕಿಸ್ ಅವರೊಂದಿಗೆ ಮಾತುಕತೆ ನಡೆಸಿ ಬಾಂಧವ್ಯವನ್ನು ಮತ್ತಷ್ಟು ಆಳಗೊಳಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಲಿದ್ದಾರೆ. ಅವರು ಎರಡೂ ದೇಶಗಳ ವಾಣಿಜ್ಯ ನಾಯಕರೊಂದಿಗೆ ಮತ್ತು ಗ್ರೀಸ್ ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ.
****
(Release ID: 1951315)
Visitor Counter : 100
Read this release in:
Tamil
,
English
,
Urdu
,
Hindi
,
Manipuri
,
Bengali
,
Punjabi
,
Gujarati
,
Odia
,
Telugu
,
Malayalam