ಪ್ರಧಾನ ಮಂತ್ರಿಯವರ ಕಛೇರಿ
ಬ್ರಿಕ್ಸ್ ನಾಯಕರ ಬೀಳ್ಕೊಡುಗೆ ಸಭೆಯಲ್ಲಿ ಪ್ರಧಾನಿ ಭಾಗಿ
प्रविष्टि तिथि:
22 AUG 2023 11:58PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 22ರಂದು ಜೋಹಾನ್ಸ್ ಬರ್ಗ್ ನ ಸಮ್ಮರ್ ಪ್ಲೇಸ್ ನಲ್ಲಿ ನಡೆದ ಬ್ರಿಕ್ಸ್ ನಾಯಕರ ಬೀಳ್ಕೊಡುಗೆಯಲ್ಲಿ ಭಾಗವಹಿಸಿದ್ದರು.
ಸಮ್ಮರ್ ಪ್ಲೇಸ್ ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮತ್ತು 15ನೇ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸಿರಿಲ್ ರಾಮಫೋಸಾ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ನಿರ್ಬಂಧಿತ ಮಾದರಿಯಲ್ಲಿ ಅಂದರೆ ನಾಯಕರನ್ನು ಹೊರತುಪಡಿಸಿ ಇತರರಿಗೆ ಪ್ರವೇಶ ನಿರ್ಬಂಧಿಸಿ ನಡೆದ ಬೀಳ್ಕೊಡುಗೆ ಸಭೆ ಜಾಗತಿಕ ಬೆಳವಣಿಗೆಗಳು ಮತ್ತು ಜಾಗತಿಕ ಸವಾಲುಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಬ್ರಿಕ್ಸ್ ವೇದಿಕೆಯನ್ನು ಬಳಸಿಕೊಳ್ಳುವ ಮಾರ್ಗಗಳ ಬಗ್ಗೆ ಚರ್ಚಿಸಲು ನಾಯಕರಿಗೆ ಒಂದು ಅವಕಾಶ ಒದಗಿಸಿತ್ತು.
****
(रिलीज़ आईडी: 1951716)
आगंतुक पटल : 106
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam