ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌  ರಾಷ್ಟ್ರಗಳಿಗೆ ಭೇಟಿ ನೀಡಿ ಭಾರತಕ್ಕೆ ಹಿಂದಿರುಗಿದ ತಕ್ಷಣ, ಆಗಸ್ಟ್ 26 ರಂದು ಬೆಂಗಳೂರಿನಲ್ಲಿ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ.


ಚಂದ್ರಯಾನ-3 ಮಿಷನ್‌ ನಲ್ಲಿ ಭಾಗಿಯಾಗಿರುವ ಇಸ್ರೋ ವಿಜ್ಞಾನಿಗಳೊಂದಿಗೆ ಪ್ರಧಾನಮಂತ್ರಿ ಅವರು ಸಂವಾದ ನಡೆಸಲಿದ್ದಾರೆ

Posted On: 25 AUG 2023 7:59PM by PIB Bengaluru

ಆಗಸ್ಟ್ 26 , 2೦23 ರಂದು ಬೆಳಿಗ್ಗೆ 7:15 ರ ಸುಮಾರಿಗೆ ಬೆಂಗಳೂರಿನಲ್ಲಿ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ಐ.ಎಸ್.ಟಿ.ಆರ್.ಎ.ಸಿ) ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಅವರು ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಪ್ರವಾಸದಿಂದ ಭಾರತಕ್ಕೆ ಹಿಂದಿರುಗಿದ ನಂತರ ತಕ್ಷಣವೇ ಬೆಂಗಳೂರು ತಲುಪಲಿದ್ದಾರೆ.

ಪ್ರಧಾನಮಂತ್ರಿ ಅವರು ಚಂದ್ರಯಾನ-3 ಮಿಷನ್‌ ನಲ್ಲಿ ಭಾಗಿಯಾಗಿರುವ ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿ ಸಂವಾದ ನಡೆಸಲಿದ್ದಾರೆ. ಚಂದ್ರಯಾನ-3 ಮಿಷನ್‌ ನಲ್ಲಿನ ಸಂಶೋಧನೆಗಳು ಮತ್ತು ಪ್ರಗತಿಯ ಬಗ್ಗೆ ಪ್ರಧಾನಮಂತ್ರಿ ಅವರಿಗೆ ಸಮಗ್ರ ಮಾಹಿತಿ ನೀಡಿ ಈ ಸಂದರ್ಭದಲ್ಲಿ ವಿವರಿಸಲಾಗುವುದು.

 

*****


(Release ID: 1952304)