ಪ್ರಧಾನ ಮಂತ್ರಿಯವರ ಕಛೇರಿ
ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
Posted On:
25 AUG 2023 10:37PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.
ಪ್ರಧಾನಮಂತ್ರಿ ಅವರು ತಮ್ಮ ಭಾಷಣದಲ್ಲಿ, ಭಾರತವು ಪ್ರಸ್ತುತ ಅನುಭವಿಸುತ್ತಿರುವ ಅಭೂತಪೂರ್ವ ಪರಿವರ್ತನೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಆಗಿರುವ ದಾಪುಗಾಲುಗಳನ್ನು ಒತ್ತಿ ಹೇಳಿದರು. ಚಂದ್ರಯಾನ ಮಿಷನ್ ನ ಯಶಸ್ಸನ್ನು ಅವರು ಶ್ಲಾಘಿಸಿದರು.
ಭಾರತ-ಗ್ರೀಸ್ ಬಹುಮುಖಿ ಸಂಬಂಧಗಳನ್ನು ಮುನ್ನಡೆಸುವಲ್ಲಿ ಗ್ರೀಸ್ ನಲ್ಲಿರುವ ಭಾರತೀಯ ಸಮುದಾಯದ ಕೊಡುಗೆಯನ್ನು ಪ್ರಧಾನಮಂತ್ರಿ ಬಿಂಬಿಸಿದರು ಮತ್ತು ಭಾರತದ ಬೆಳವಣಿಗೆಯ ಕಥೆಯ ಭಾಗವಾಗುವಂತೆ ಅವರನ್ನು ಒತ್ತಾಯಿಸಿದರು.
*****
(Release ID: 1952838)
Visitor Counter : 125
Read this release in:
English
,
Urdu
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam