ಪ್ರಧಾನ ಮಂತ್ರಿಯವರ ಕಛೇರಿ

ರೋಜ್ಗಾರ್ ಮೇಳದ ಅಡಿಯಲ್ಲಿ, ಪ್ರಧಾನ ಮಂತ್ರಿಯವರು ಆಗಸ್ಟ್ 28 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ


ರೋಜ್ ಗಾರ್ ಮೇಳವು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಪೂರೈಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ

ಹೊಸದಾಗಿ ನೇಮಕಗೊಂಡವರು ಆನ್ ಲೈನ್ ಮಾಡ್ಯೂಲ್ ಕರ್ಮಯೋಗಿ ಪ್ರರಂಭ್ ಮೂಲಕ ತಮ್ಮನ್ನು ತಾವು ತರಬೇತಿ ಮಾಡಿಕೊಳ್ಳಬೇಕು

Posted On: 27 AUG 2023 6:27PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 28ರಂದು ಬೆಳಗ್ಗೆ 10:30 AM ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಿಯವರು ಈ ಸಂದರ್ಭದಲ್ಲಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ. ಈ ರೋಜ್‌ಗಾರ್ ಮೇಳ ಕಾರ್ಯಕ್ರಮದ ಮೂಲಕ, ಗೃಹ ಸಚಿವಾಲಯವು ವಿವಿಧ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಸಿಬ್ಬಂದಿಯನ್ನು ನೇಮಕ ಮಾಡುತ್ತಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಗಡಿ ಭದ್ರತಾ ಪಡೆ (BSF), ಸಶಸ್ತ್ರ ಸೀಮಾ ಬಲ್ (SSB), ಅಸ್ಸಾಂ ರೈಫಲ್ಸ್, ಕೇಂದ್ರ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಹಾಗೂ ದೆಹಲಿ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಆಗಿದೆ. ದೇಶಾದ್ಯಂತ ಆಯ್ಕೆಯಾದವರು ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ವಿವಿಧ ಸಂಸ್ಥೆಗಳಲ್ಲಿ ಕಾನ್‌ಸ್ಟೆಬಲ್ (ಜನರಲ್ ಡ್ಯೂಟಿ), ಸಬ್-ಇನ್‌ಸ್ಪೆಕ್ಟರ್ (ಜನರಲ್ ಡ್ಯೂಟಿ) ಮತ್ತು ನಾನ್-ಜನರಲ್ ಡ್ಯೂಟಿ ಕೇಡರ್ ಹುದ್ದೆಗಳಂತಹ ವಿವಿಧ ಹುದ್ದೆಗಳಿಗೆ ಸೇರಿಕೊಳ್ಳಲಿದ್ದಾರೆ.

ಸಿಎಪಿಎಫ್‌ಗಳು ಮತ್ತು ದೆಹಲಿ ಪೊಲೀಸರ ಬಲವರ್ಧನೆಯು ಆಂತರಿಕ ಭದ್ರತೆ, ಭಯೋತ್ಪಾದನೆ ನಿಗ್ರಹ, ಬಂಡಾಯವನ್ನು ಎದುರಿಸುವುದು, ಉಗ್ರವಾದ ಮತ್ತು ರಾಷ್ಟ್ರದ ಗಡಿಗಳನ್ನು ರಕ್ಷಿಸುವಂತಹ ಬಹು ಆಯಾಮದ ಪಾತ್ರವನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಪಡೆಗಳಿಗೆ ಸಹಾಯ ಮಾಡುತ್ತದೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಹೆಜ್ಜೆಯಾಗಿದೆ. ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಹೊಸದಾಗಿ ಸೇರ್ಪಡೆಗೊಂಡವರು iGOT ಕರ್ಮಯೋಗಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮಾಡ್ಯೂಲ್ ಆಗಿರುವ ಕರ್ಮಯೋಗಿ ಪ್ರಾರಂಭ್ ಮೂಲಕ ತರಬೇತಿ ಪಡೆಯುವ ಅವಕಾಶವನ್ನು ಪಡೆಯುತ್ತಿದ್ದಾರೆ, ಅಲ್ಲಿ 673 ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್‌ಗಳನ್ನು 'ಎಲ್ಲಿಯಾದರೂ ಯಾವುದೇ ಸಾಧನ' ಕಲಿಕೆಯ ಸ್ವರೂಪಕ್ಕಾಗಿ ಲಭ್ಯಗೊಳಿಸಲಾಗಿದೆ

****



(Release ID: 1952847) Visitor Counter : 84