ಪ್ರಧಾನ ಮಂತ್ರಿಯವರ ಕಛೇರಿ

ಭಾರತದ ಮೊದಲ ಸೌರ ಮಿಷನ್ ಆದಿತ್ಯ -ಎಲ್ 1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೊದ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳನ್ನು ಪ್ರಧಾನಮಂತ್ರಿ ಅಭಿನಂದಿಸಿದರು

Posted On: 02 SEP 2023 2:40PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮೊದಲ ಸೌರ ಮಿಷನ್ ಆದಿತ್ಯ -ಎಲ್1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೊದ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳನ್ನು ಅಭಿನಂದಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

" ಚಂದ್ರಯಾನ -3 ಯಶಸ್ಸಿನ ನಂತರ, ಭಾರತವು ತನ್ನ ಬಾಹ್ಯಾಕಾಶ ಪ್ರಯಾಣವನ್ನು ಮುಂದುವರೆಸಿದೆ. ಭಾರತದ ಮೊದಲ ಸೌರ ಮಿಷನ್ ಆದಿತ್ಯ -ಎಲ್ 1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೊದ ನಮ್ಮ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ,’’ ಎಂದು ಹೇಳಿದ್ದಾರೆ.

 

*****

 



(Release ID: 1954386) Visitor Counter : 78