ಪ್ರಧಾನ ಮಂತ್ರಿಯವರ ಕಛೇರಿ
ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರಲ್ಲಿ "ಎ+" ರೇಟಿಂಗ್ ಪಡೆದ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ಅಭಿನಂದಿಸಿದರು
Posted On:
01 SEP 2023 8:17PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ (ಜಾಗತಿಕ ಹಣಕಾಸು ಕೇಂದ್ರ) ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023ರಲ್ಲಿ 'ಎ+' ರೇಟಿಂಗ್ ಪಡೆದ ಆರ್ ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಅಭಿನಂದಿಸಿದ್ದಾರೆ. ಎ+ ರೇಟಿಂಗ್ ಪಡೆದ ಮೂವರು ಕೇಂದ್ರ ಬ್ಯಾಂಕ್ ಗವರ್ನರ್ ಗಳ ಪಟ್ಟಿಯಲ್ಲಿ ಶ್ರೀ ದಾಸ್ ಅಗ್ರಸ್ಥಾನದಲ್ಲಿದ್ದಾರೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಟ್ವೀಟ್ ಗೆ ಉತ್ತರವಾಗಿ, ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಈ ಕುರಿತು ಹಂಚಿಕೊಂಡಿದ್ದಾರೆ.
"ಆರ್ ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರಿಗೆ ಅಭಿನಂದನೆಗಳು. ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದ್ದು, ಜಾಗತಿಕ ವೇದಿಕೆಯಲ್ಲಿ ನಮ್ಮ ಆರ್ಥಿಕ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ. ಅವರ ಸಮರ್ಪಣೆ ಮತ್ತು ದೃಷ್ಟಿಕೋನವು ನಮ್ಮ ರಾಷ್ಟ್ರದ ಬೆಳವಣಿಗೆಯ ಪಥವನ್ನು ಬಲಪಡಿಸುತ್ತದೆ,’’ಎಂದಿದ್ದಾರೆ.
***
(Release ID: 1954548)
Visitor Counter : 99
Read this release in:
Assamese
,
Telugu
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Malayalam