ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಮೊರಾಕೊದಲ್ಲಿ ಭೂಕಂಪನದಿಂದ ಸಂಭವಿಸಿದ ಜೀವಹಾನಿಗಳಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
                    
                    
                        
                    
                
                
                    Posted On:
                09 SEP 2023 8:39AM by PIB Bengaluru
                
                
                
                
                
                
                ಈ ಕಷ್ಟದ ಸಮಯದಲ್ಲಿ ಮೊರಾಕೊಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಮೊರಾಕೊದಲ್ಲಿ ಘಟಿಸಿದ ಭೂಕಂಪದಿಂದ ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕಷ್ಟದ ಸಮಯದಲ್ಲಿ ಮೊರಾಕೊಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಹೇಳಿದ್ದಾರೆ.
ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ ನಲ್ಲಿ, ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ಕಳುಹಿಸಿದ್ದಾರೆ;
"ಮೊರಾಕೊದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಆಗಿರುವ ಜೀವಹಾನಿಯಿಂದ ತೀವ್ರ ನೋವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ಮೊರಾಕೊದ ಜನರೊಂದಿಗೆ ಇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಕಷ್ಟದ ಸಮಯದಲ್ಲಿ ಮೊರಾಕೊಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಭಾರತ ಸಿದ್ಧವಾಗಿದೆ.
 
********
 
                
                
                
                
                
                (Release ID: 1955735)
                Visitor Counter : 180
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Marathi 
                    
                        ,
                    
                        
                        
                            Bengali 
                    
                        ,
                    
                        
                        
                            Manipuri 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam