ಪ್ರಧಾನ ಮಂತ್ರಿಯವರ ಕಛೇರಿ
ಐರೋಪ್ಯ ಒಕ್ಕೂಟದ ಅಧ್ಯಕ್ಷರು ಮತ್ತು ಆಯುಕ್ತರ ಜತೆ ಪ್ರಧಾನಮಂತ್ರಿ ಮಾತುಕತೆ
Posted On:
10 SEP 2023 7:58PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐರೋಪ್ಯ ಒಕ್ಕೂಟದ ಅಧ್ಯಕ್ಷರಾದ ಚಾರ್ಲ್ಸ್ ಮೈಕೆಲ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಸೆಪ್ಟೆಂಬರ್ 10 ರಂದು ಹೊಸದಿಲ್ಲಿಯಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಮಾತುಕತೆ ನಡೆಸಿದರು.
ಭಾರತದ ಜಿ20 ಅಧ್ಯಕ್ಷತೆಗೆ ಉಭಯ ನಾಯಕರೂ ಪ್ರಧಾನಮಂತ್ರಿಯವರನ್ನು ಅಭಿನಂದಿಸಿದರು.
ಮುಂದಿನ ಭಾರತ - ಐರೋಪ್ಯ ಒಕ್ಕೂಟದ ಶೃಂಗಸಭೆಯಲ್ಲಿ ನಡೆಯುತ್ತಿರುವ ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆಗಳು, ಹವಾಮಾನ ಬದಲಾವಣೆ ಮತ್ತು ಜೀವನ, ಡಿಜಿಟಲ್ ತಂತ್ರಜ್ಞಾನ, ಮತ್ತು ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿ (TTC), ಐರೋಪ್ಯ ಒಕ್ಕೂಟದ ಪಾಲುದಾರಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಸೆಪ್ಟೆಂಬರ್ 9 ರಂದು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್, ಕಾರಿಡಾರ್‌ನ ತ್ವರಿತ ಅನುಷ್ಠಾನ, ಕಾರಿಡಾರ್ ಅಡಿಯಲ್ಲಿ ಸೌರ ಯೋಜನೆಗಳ ಸಾಧ್ಯತೆಗಳ ಕುರಿತು ಪ್ರಧಾನಮಂತ್ರಿ ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದರು.
****
(Release ID: 1956130)
Visitor Counter : 145
Read this release in:
English
,
Urdu
,
Hindi
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam