ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಪದ್ಮ ಪ್ರಶಸ್ತಿಗಳು-2024 ಇದಕ್ಕಾಗಿ ನಾಮನಿರ್ದೇಶನಗಳನ್ನು ಸಲ್ಲಿಸಲು 15ನೇ ಸೆಪ್ಟೆಂಬರ್, 2023 ರವರೆಗೆ ಅವಕಾಶ ತೆರೆದಿರುತ್ತದೆ

Posted On: 12 SEP 2023 10:47AM by PIB Bengaluru

2024 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳಿಗೆ 2024 ರ ಆನ್ಲೈನ್ ನಾಮನಿರ್ದೇಶನಗಳು / ಶಿಫಾರಸುಗಳು 1 ನೇ ಮೇ 2023 ರಂದು ಪ್ರಾರಂಭವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಕ್ಕೆ ಕೊನೆಯ ದಿನಾಂಕ 15 ಸೆಪ್ಟೆಂಬರ್, 2023. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು/ ಶಿಫಾರಸುಗಳು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್ನಲ್ಲಿ (https://awards.gov.in) ಆನ್ಲೈನ್ನಲ್ಲಿ ಸ್ವೀಕರಿಸಲಾಗುತ್ತದೆ.

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಮುಂತಾದ ಪದ್ಮ ಪ್ರಶಸ್ತಿಗಳು ಇದರಲ್ಲಿ ಸೇರಿವೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯು 'ವಿಶಿಷ್ಟತೆಯ ಕೆಲಸವನ್ನು' ಗುರುತಿಸಲು ಪ್ರಯತ್ನಿಸುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿ ಹಾಗೂ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ/ ವರ್ಗ ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು/ ಸೇವೆಗಾಗಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ. 

ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಸಾರ್ವಜನಿಕ ಕ್ಷೇತ್ರದ ಉದ್ಯಮಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.

ಪದ್ಮ ಪ್ರಶಸ್ತಿಗಳನ್ನು "ಜನರ ಪದ್ಮ" ವನ್ನಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ, ಎಲ್ಲಾ ನಾಗರಿಕರು ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮನಿರ್ದೇಶನಗಳು/ ಶಿಫಾರಸುಗಳನ್ನು ಮಾಡಲು ವಿನಂತಿಸಲಾಗಿದೆ. 

ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಎಸ್.ಸಿ ಮತ್ತು ಎಸ್.ಟಿ.ಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇತರರಲ್ಲಿ ಶ್ರೇಷ್ಠತೆ ಮತ್ತು ಸಾಧನೆಗಳು ನಿಜವಾಗಿಯೂ ಗುರುತಿಸಲು ಅರ್ಹರಾಗಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಬಹುದು.

ರಾಷ್ಟ್ರೀಯ ಪುರಸ್ಕಾರ್ ( https://awards.gov.in ) ಪೋರ್ಟಲ್ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ನಾಮನಿರ್ದೇಶನಗಳು / ಶಿಫಾರಸುಗಳು ಒಳಗೊಂಡಿರಬೇಕು. ನಿರೂಪಣೆಯ ರೂಪದಲ್ಲಿ ಉಲ್ಲೇಖವನ್ನು ಒಳಗೊಂಡಂತೆ (ಗರಿಷ್ಠ 800 ಪದಗಳು), ಅವಳ/ಅವನ ಆಯಾ ಕ್ಷೇತ್ರ/ಶಿಸ್ತುಗಳಲ್ಲಿ ಶಿಫಾರಸು ಮಾಡಿದ ವ್ಯಕ್ತಿಯ ಸೇವೆಗಳ ವಿಶಿಷ್ಟವಾದ ಮತ್ತು ಅಸಾಧಾರಣ ಸಾಧನೆಗಳನ್ನು ಸ್ಪಷ್ಟವಾಗಿ ನಮೂದಿಸಬೇಕು. 

ಪದ್ಮ ಪ್ರಶಸ್ತಿಗಳು - ಈ ಸಂಬಂಧದ ವಿವರಗಳು ಗೃಹ ಸಚಿವಾಲಯದ ( https://mha.gov.in ) ವೆಬ್ಸೈಟ್ನಲ್ಲಿ ಮತ್ತು ಪದ್ಮ ಪ್ರಶಸ್ತಿಗಳ ( https://padmaawards.gov.in ) ಪೋರ್ಟಲ್ನಲ್ಲಿ 'ಪ್ರಶಸ್ತಿಗಳು ಮತ್ತು ಪದಕಗಳು' ಶೀರ್ಷಿಕೆಯಡಿಯಲ್ಲಿ ಲಭ್ಯವಿದೆ. ಈ ಪ್ರಶಸ್ತಿಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ನಿಯಮಗಳುhttp://https://padmaawards.gov.in/AboutAwards.aspx  ಲಿಂಕ್ ನೊಂದಿಗೆ ವೆಬ್ಸೈಟ್ನಲ್ಲಿ ಲಭ್ಯವಿದೆ.

*****


(Release ID: 1956592) Visitor Counter : 171