ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್ ವೇದಿಕೆಯಡಿ ಬರುವ ಭಾರತದ ಸರ್ವೋಚ್ಚ ನ್ಯಾಯಾಲಯವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು

प्रविष्टि तिथि: 14 SEP 2023 2:48PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಸರ್ವೋಚ್ಚ ನ್ಯಾಯಾಲಯವು ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್ ವೇದಿಕೆಯಡಿ ಬರಲಿದೆ ಎಂದು ಮಾಹಿತಿ ನೀಡಿರುವ ಭಾರತದ ಮುಖ್ಯ ನ್ಯಾಯಮೂರ್ತಿಗಳ ಘೋಷಣೆಯನ್ನು ಶ್ಲಾಘಿಸಿದ್ದಾರೆ. ತಂತ್ರಜ್ಞಾನದ ಇಂತಹ ಬಳಕೆಯು ಮತ್ತಷ್ಟು ಪಾರದರ್ಶಕತೆಯನ್ನು ತರುತ್ತದೆ ಮತ್ತು ನಮ್ಮ ದೇಶದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಎಎನ್ಐಯ ಎಕ್ಸ್ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು, ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ;

"ಸುಪ್ರೀಂ ಕೋರ್ಟ್ ಮತ್ತು ಸಿಜೆಐ ಡಿ.ವೈ.ಚಂದ್ರಚೂಡ್ ಜೀ ಅವರ ಶ್ಲಾಘನೀಯ ಹೆಜ್ಜೆ. ತಂತ್ರಜ್ಞಾನದ ಇಂತಹ ಬಳಕೆಯು ಮತ್ತಷ್ಟು ಪಾರದರ್ಶಕತೆಯನ್ನು ನೀಡುತ್ತದೆ ಮತ್ತು ನಮ್ಮ ದೇಶದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ,’’ ಎಂದಿದ್ದಾರೆ.

 

 

****


(रिलीज़ आईडी: 1957339) आगंतुक पटल : 179
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam