ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಶಾಂತಿನಿಕೇತನ ಸೇರ್ಪಡೆಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

प्रविष्टि तिथि: 17 SEP 2023 9:22PM by PIB Bengaluru

ಶಾಂತಿನಿಕೇತನವು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯ ಭಾಗವಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;

"ಶ್ರೀ ಗುರುದೇವ್ ರವೀಂದ್ರನಾಥ ಠಾಗೂರ್ ಅವರ ದೃಷ್ಟಿಕೋನ ಮತ್ತು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಾಕಾರದ ಸಂಕೇತವಾಗಿರುವ ಶಾಂತಿನಿಕೇತನವನ್ನು @ಯುನೆಸ್ಕೋ ( @UNESCO ) ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಎಲ್ಲಾ ಭಾರತೀಯರಿಗೆ ಹೆಮ್ಮೆಯ ಕ್ಷಣವಾಗಿದೆ."

 

***


(रिलीज़ आईडी: 1958387) आगंतुक पटल : 133
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam