ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹೊಯ್ಸಳರ ಪವಿತ್ರ ವಾಸ್ತುಶಿಲ್ಪಗಳ ಸಮೂಹ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಸೇರ್ಪಡೆ: ಪ್ರಧಾನಿ ಮೋದಿ ಶ್ಲಾಘನೆ

प्रविष्टि तिथि: 18 SEP 2023 9:19PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೊಯ್ಸಳರ ಪವಿತ್ರ ವಾಸ್ತುಶಿಲ್ಪಗಳ ಸಮೂಹ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆಯಾಗಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಯುನೆಸ್ಕೊ ಟ್ವಿಟ್ಟರ್ ಪೇಜ್ ನಲ್ಲಿ ಹಂಚಿಕೊಂಡಿರುವ ಸುದ್ದಿಯನ್ನು ಮರುಹಂಚಿಕೊಂಡಿರುವ ಪ್ರಧಾನಿ ಮೋದಿಯವರು,

“ಭಾರತಕ್ಕೆ ಇನ್ನಷ್ಟು ಹೆಮ್ಮೆ ತಂದಿದೆ! ಹೊಯ್ಸಳರ ಭವ್ಯವಾದ ಪವಿತ್ರ ವಾಸ್ತುಶಿಲ್ಪ ಸಮೂಹಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಕೆತ್ತಲಾಗಿದೆ. ಹೊಯ್ಸಳ ದೇವಾಲಯಗಳ ಕಾಲಾತೀತ ಸೌಂದರ್ಯ ಮತ್ತು ಸಂಕೀರ್ಣ ವೈವಿಧ್ಯತೆಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಜರ ಅಸಾಧಾರಣ ಕರಕುಶಲತೆಗೆ ಸಾಕ್ಷಿಯಾಗಿದೆ ಎಂದು ಬರೆದುಕೊಂಡಿದ್ದಾರೆ.


(रिलीज़ आईडी: 1958659) आगंतुक पटल : 193
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam