ಪ್ರಧಾನ ಮಂತ್ರಿಯವರ ಕಛೇರಿ
ಸೆಪ್ಟೆಂಬರ್ 23 ರಂದು ನವದೆಹಲಿಯಲ್ಲಿ 'ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಉದ್ಘಾಟಿಸಲಿರುವ ಪ್ರಧಾನಮಂತ್ರಿ
ದೇಶದಲ್ಲಿ ಮೊದಲ ಬಾರಿಗೆ ಸಮ್ಮೇಳನ ಆಯೋಜನೆ
ಸಮ್ಮೇಳನದ ವಿಷಯ: ' ನ್ಯಾಯ ವಿತರಣಾ ವ್ಯವಸ್ಥೆಯಲ್ಲಿ ಉದಯೋನ್ಮುಖ ಸವಾಲುಗಳು '
प्रविष्टि तिथि:
22 SEP 2023 2:10PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 23ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ' ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಬಾರ್ ಕೌನ್ಸಿಲ್ ಆಫ್ ಇಂಡಿಯಾ 2023 ರ ಸೆಪ್ಟೆಂಬರ್ 23 ಮತ್ತು 24 ರಂದು 'ನ್ಯಾಯ ವಿತರಣಾ ವ್ಯವಸ್ಥೆಯಲ್ಲಿ ಉದಯೋನ್ಮುಖ ಸವಾಲುಗಳು' ಎಂಬ ವಿಷಯದ ಮೇಲೆ ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023 ಅನ್ನು ಆಯೋಜಿಸಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಾಮುಖ್ಯತೆಯ ವಿವಿಧ ಕಾನೂನು ವಿಷಯಗಳ ಬಗ್ಗೆ ಅರ್ಥಪೂರ್ಣಸಂವಾದ ಮತ್ತು ಚರ್ಚೆಗೆ ವೇದಿಕೆಯಾಗಿ ಕಾರ್ಯನಿರ್ವಹಿಸುವುದು, ಆಲೋಚನೆಗಳು ಮತ್ತು ಅನುಭವಗಳ ವಿನಿಮಯವನ್ನು ಉತ್ತೇಜಿಸುವುದು ಮತ್ತು ಕಾನೂನು ವಿಷಯಗಳ ಬಗ್ಗೆ ಅಂತಾರಾಷ್ಟ್ರೀಯ ಸಹಕಾರ ಮತ್ತು ತಿಳುವಳಿಕೆಯನ್ನು ಬಲಪಡಿಸುವುದು ಸಮ್ಮೇಳನದ ಉದ್ದೇಶವಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿರುವ ಈ ಸಮ್ಮೇಳನದಲ್ಲಿ ಉದಯೋನ್ಮುಖ ಕಾನೂನು ಪ್ರವೃತ್ತಿಗಳು, ಗಡಿಯಾಚೆಗಿನ ದಾವೆಗಳಲ್ಲಿನ ಸವಾಲುಗಳು, ಕಾನೂನು ತಂತ್ರಜ್ಞಾನ, ಪರಿಸರ ಕಾನೂನು ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಖ್ಯಾತ ನ್ಯಾಯಾಧೀಶರು, ಕಾನೂನು ವೃತ್ತಿಪರರು ಮತ್ತು ಜಾಗತಿಕ ಕಾನೂನು ಕ್ಷೇತ್ರದ ನಾಯಕರು ಭಾಗವಹಿಸಲಿದ್ದಾರೆ.
****
(रिलीज़ आईडी: 1959692)
आगंतुक पटल : 187
इस विज्ञप्ति को इन भाषाओं में पढ़ें:
Telugu
,
Bengali
,
English
,
Urdu
,
Marathi
,
हिन्दी
,
Manipuri
,
Assamese
,
Punjabi
,
Gujarati
,
Odia
,
Tamil
,
Malayalam