ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಕ್ರೀಡಾಕೂಟದಲ್ಲಿ ದಶಕಗಳ ನಂತರ ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ತಂಡ ಗಳಿಸಿದ ಐತಿಹಾಸಿಕ ಚಿನ್ನದ ಪದಕಕ್ಕೆ ಪ್ರಧಾನಿ ಶ್ಲಾಘನೆ
प्रविष्टि तिथि:
26 SEP 2023 4:24PM by PIB Bengaluru
ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ 41 ವರ್ಷಗಳ ನಂತರ ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ಟೀಮ್ ಈವೆಂಟ್ ನಲ್ಲಿ ಚಿನ್ನದ ಪದಕ ಗೆದ್ದ ಹೃದಯ ಛೇಡಾ, ಅನುಷ್ ಅಗರ್ವಾಲಾ, ಸುದೀಪ್ತಿ ಹಜೇಲಾ ಮತ್ತು ದಿವ್ಯಕ್ರಿತ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.
“ಹಲವು ದಶಕಗಳ ನಂತರ, ನಮ್ಮ ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ತಂಡವು ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ”
ಹೃದಯ್ ಛೇಡಾ, ಅನುಷ್ ಅಗರ್ವಾಲಾ, ಸುದೀಪ್ತಿ ಹಜೇಲಾ ಮತ್ತು ದಿವ್ಯಕೃತ್ ಸಿಂಗ್ ಅವರು ಅಪ್ರತಿಮ ಕೌಶಲ್ಯ, ಟೀಮ್ವರ್ಕ್ ಅನ್ನು ಪ್ರದರ್ಶಿಸಿದ್ದಾರೆ ಮತ್ತು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ರಾಷ್ಟ್ರಕ್ಕೆ ಗೌರವವನ್ನು ತಂದಿದ್ದಾರೆ.
ಈ ಐತಿಹಾಸಿಕ ಸಾಧನೆಗಾಗಿ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
(रिलीज़ आईडी: 1961000)
आगंतुक पटल : 137
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam