ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಾಲಕಿಯರ ಡಿಂಗಿ - ILCA4 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೇಹಾ ಠಾಕೂರ್ ಅವರಿಗೆ ಪ್ರಧಾನಿ ಅಭಿನಂದನೆ

Posted On: 26 SEP 2023 6:02PM by PIB Bengaluru

ಏಷ್ಯನ್ ಕ್ರೀಡಾಕೂಟದಲ್ಲಿ ಬಾಲಕಿಯರ ಡಿಂಗಿ - ILCA4 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೇಹಾ ಠಾಕೂರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಸಂಬಂಧ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.

“ಸಮರ್ಪಣೆ ಮತ್ತು ಪರಿಶ್ರಮದ ಉಜ್ವಲ ಉದಾಹರಣೆ! ಇದಾಗಿದೆ. ನೇಹಾ ಠಾಕೂರ್ ಡಿಂಗಿ - ILCA4 ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಆಕೆಯ ಅಸಾಧಾರಣ ಪ್ರದರ್ಶನವು ಅವರ ಪ್ರತಿಭೆ ಮತ್ತು ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಅವರಿಗೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.


(Release ID: 1961014)