ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನ ಪುರುಷರ RS:X ಈವೆಂಟ್ನಲ್ಲಿ ಕಂಚಿನ ಪದಕ ಗೆದ್ದ ಇಯಾಬಾದ್ ಅಲಿಗೆ ಪ್ರಧಾನಮಂತ್ರಿ ಅಭಿನಂದನೆ
Posted On:
26 SEP 2023 4:20PM by PIB Bengaluru
ಏಷ್ಯನ್ ಕ್ರೀಡಾಕೂಟದ ಸೈಲಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಇಯಾಬಾದ್ ಅಲಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಪುರುಷರ RS:X ಸ್ಪರ್ಧೆಯಲ್ಲಿ ಇಯಾಬಾದ್ ಅಲಿ ನೀಡಿದ ಅದ್ಭುತ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.
ಈ ಸಂಬಂಧ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ನೀಡಿದ್ದಾರೆ.
“ಸೈಲಿಂಗ್ನಲ್ಲಿ ಇಯಾಬಾದ್ ಅಲಿ ಅದ್ಭುತ ಪ್ರದರ್ಶನ ನೀಡಿ ಏಷ್ಯನ್ ಗೇಮ್ಸ್ನ RS:X ಪುರುಷರ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆಲ್ಲುವ ಮೂಲಕ ನಮಗೆ ಹೆಮ್ಮೆ ತಂದಿದ್ದಾರೆ. ನಮ್ಮ ಯುವ ಪ್ರತಿಭೆಗಳಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಅವರ ಸಾಧನೆ ತೋರಿಸುತ್ತದೆ. ಅವರಿಗೆ ಶುಭಾಶಯಗಳು” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.
(Release ID: 1961020)
Visitor Counter : 99
Read this release in:
Malayalam
,
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu