ಪ್ರಧಾನ ಮಂತ್ರಿಯವರ ಕಛೇರಿ
ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಗೆ ಪಾತ್ರರಾದ ವಹೀದಾ ರೆಹಮಾನ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
26 SEP 2023 6:15PM by PIB Bengaluru
2023 ರ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಗೆ ಪಾತ್ರರಾದ ವಹೀದಾ ರೆಹಮಾನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾದ ಶ್ರೀ ಅನುರಾಗ್ ಠಾಕೂರ್ ಅವರ ಸಾಮಾಜಿಕ ಜಾಲತಾಣ X ನ ಪೋಸ್ಟ್ ಅನ್ನು ಹಂಚಿಕೊಂಡು ಪ್ರಧಾನಮಂತ್ರಿ ಅವರು ಸಂದೇಶ ನೀಡಿದ್ದಾರೆ.
“ವಹೀದಾ ರೆಹಮಾನ್ ಜೀ ಅವರಿಗೆ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತಸ ತಂದಿದೆ. ಭಾರತೀಯ ಚಿತ್ರರಂಗದಲ್ಲಿ ಅವರ ಪಯಣ ಅಳಿಸಲಾಗದ ಛಾಪು ಮೂಡಿಸಿದೆ. ಪ್ರತಿಭೆ, ಸಮರ್ಪಣೆ ಮತ್ತು ಅನುಗ್ರಹದ ದಾರಿದೀಪವಾಗಿರುವ ಅವರು ನಮ್ಮ ಚಿತ್ರರಂಗದ ಪರಂಪರೆಯ ಅತ್ಯುತ್ತಮತೆಯನ್ನು ಸಾಕಾರಗೊಳಿಸಿದ್ದಾರೆ. ಅವರಿಗೆ ಅಭಿನಂದನೆಗಳು” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
(रिलीज़ आईडी: 1961028)
आगंतुक पटल : 180
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam