ಪ್ರಧಾನ ಮಂತ್ರಿಯವರ ಕಛೇರಿ
ಪುರುಷರ ಸ್ಕೀಟ್ ಶೂಟಿಂಗ್ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಅನಂತ್ ಜೀತ್ ಸಿಂಗ್ ನರುಕಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
27 SEP 2023 8:44PM by PIB Bengaluru
ಏಷ್ಯನ್ ಗೇಮ್ಸ್ ನ ಪುರುಷರ ಸ್ಕೀಟ್ ಶೂಟಿಂಗ್ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ಅನಂತ್ ಜೀತ್ ಸಿಂಗ್ ನರುಕಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;
“ನಮ್ಮ ಕ್ರೀಡಾಪಟುಗಳು ಏಷ್ಯನ್ ಗೇಮ್ಸ್ ನಲ್ಲಿ ಇತಿಹಾಸವನ್ನು ಬರೆಯುವುದನ್ನು ಮುಂದುವರೆಸಿದ್ದಾರೆ!
ಪುರುಷರ ಸ್ಕೀಟ್ ಶೂಟಿಂಗ್ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ಅನಂತ್ ಜೀತ್ ಸಿಂಗ್ ನರುಕಾ ಅವರಿಗೆ ಅಭಿನಂದನೆಗಳು. ಇದು ಏಷ್ಯನ್ ಗೇಮ್ಸ್ ನಲ್ಲಿ ಈ ಸ್ಪರ್ಧಾ ವಿಭಾಗ ಇತಿಹಾಸದಲ್ಲಿ ಭಾರತ ಗೆದ್ದ ಮೊತ್ತಮೊದಲ ಪದಕವಾಗಿದೆ.
ಈ ಯಶಸ್ಸು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿ.''
***
(Release ID: 1961771)
Visitor Counter : 95
Read this release in:
Punjabi
,
English
,
Urdu
,
Marathi
,
Hindi
,
Bengali
,
Manipuri
,
Assamese
,
Gujarati
,
Odia
,
Tamil
,
Telugu
,
Malayalam