ಪ್ರಧಾನ ಮಂತ್ರಿಯವರ ಕಛೇರಿ
50 ಮೀಟರ್ ರೈಫಲ್ 3 ಪೊಸಿಷನ್ಸ್ ಮಹಿಳೆಯರ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಸಿಫ್ಟ್ ಕೌರ್ ಸಮ್ರಾ ಅವರಿಗೆ ಪ್ರಧಾನಿ ಅಭಿನಂದನೆ
ಪ್ರಕಟಣಾ ದಿನಾಂಕ:
27 SEP 2023 8:50PM by PIB Bengaluru
ಏಷ್ಯನ್ ಕ್ರೀಡಾಕೂಟದಲ್ಲಿ 50 ಮೀಟರ್ ರೈಫಲ್ 3 ಪೊಸಿಷನ್ಸ್ ಮಹಿಳೆಯರ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಸಿಫ್ಟ್ ಕೌರ್ ಸಮ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “50 ಮೀ ರೈಫಲ್ 3 ಪೊಸಿಷನ್ಸ್ ಮಹಿಳೆಯರ ಶೂಟಿಂಗ್‌ನಲ್ಲಿ ಚಿನ್ನದ ಪದಕವನ್ನು ಗೆದ್ದು ತರುವ ಮೂಲಕ ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ಬರೆದ @SiftSamra ಅವರಿಗೆ ಅಭಿನಂದನೆಗಳು. ಅವರು ದಾಖಲೆ ನಿರ್ಮಿಸಿರುವುದು ಇನ್ನಷ್ಟು ಸಂತಸ ತಂದಿದೆ. ಆಕೆ ಪ್ರತಿಯೊಬ್ಬ ಭಾರತೀಯನಿಗೂ ಸ್ಪೂರ್ತಿ. ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳು.'' ಎಂದು ಬರೆದುಕೊಂಡಿದ್ದಾರೆ.
(ಪ್ರಕಟಣೆ ಐ.ಡಿ.: 1961786)
ವಿಸಿಟರ್ ಕೌಂಟರ್ : 144
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
Odia
,
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Telugu
,
Malayalam