ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಏಷ್ಯನ್ ಗೇಮ್ಸ್ 2022 ರಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಪಾಲಕ್: ಪ್ರಧಾನಿ ಅಭಿನಂದನೆ

प्रविष्टि तिथि: 29 SEP 2023 2:16PM by PIB Bengaluru

2022ರ ಏಷ್ಯನ್ ಗೇಮ್ಸ್‌ನಲ್ಲಿ ಹ್ಯಾಂಗ್‌ಝೌನಲ್ಲಿ ನಡೆದ 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪಾಲಕ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಶೂಟಿಂಗ್‌ನಲ್ಲಿ ಭಾರತಕ್ಕೆ ಮತ್ತೊಂದು ವಿಶೇಷ ಕ್ಷಣ!

ಪಾಲಕ್ ಅವರ ಅಸಾಧಾರಣ ಪ್ರದರ್ಶನಕ್ಕಾಗಿ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ಅವರು ಆಟದ ಮೇಲೆ ತೋರಿಸಿದ ನಿಖರತೆ ಮತ್ತು ಗಮನದಿಂದ ಚಿನ್ನ ಪದಕ ಗೆದ್ದು ನಮ್ಮ ರಾಷ್ಟ್ರಕ್ಕೆ ಅಪಾರ ಹೆಮ್ಮೆ ತಂದಿದೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

***


(रिलीज़ आईडी: 1962103) आगंतुक पटल : 102
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Assamese , Manipuri , Punjabi , Gujarati , Odia , Tamil , Telugu , Malayalam