ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತಮಿಳುನಾಡು ಬಸ್ ಅಪಘಾತದಲ್ಲಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ

Posted On: 01 OCT 2023 11:29AM by PIB Bengaluru

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಆಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅವರ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದುಃಖಿತ ಕುಟುಂಬಗಳೊಂದಿಗೆ ಇರುತ್ತವೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.

ಮೃತರ ಅವಲಂಬಿತ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ( ಪಿ.ಎಂ.ಎನ್.ಆರ್.ಎಫ್. ) ನಿಂದ ರೂ. 2 ಲಕ್ಷ ಅನುಕಂಪದ ಸಹಾಯಧನ ಹಾಗೂ  ಗಾಯಗೊಂಡವರಿಗೆ ರೂ.50,000 ಗಳನ್ನು ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ

ಪ್ರಧಾನಮಂತ್ರಿಯವರ ಕಾರ್ಯಾಲಯ ಈ ರೀತಿ ಸಂದೇಶ ಎಕ್ಸ್ ಖಾತೆಯಲ್ಲಿ ಹಾಕಿದೆ;

"ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರ್ ಬಳಿಯ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ನೋವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. 

 

Pained by the loss of lives due to a bus accident near Coonoor in Nilgiris district, Tamil Nadu. My thoughts are with the bereaved families. I pray that the injured recover soon. An ex-gratia of Rs. 2 lakh from PMNRF would be given to the next of kin of each deceased. Those…

— PMO India (@PMOIndia) October 1, 2023

(Release ID: 1962766) Visitor Counter : 102