ವಸತಿ ಮತ್ತು ನಗರ ಬಡತನ ನಿರ್ಮೂಲನೆ ಸಚಿವಾಲಯ
azadi ka amrit mahotsav

ರಾಜ್ ಘಾಟ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದ ಕೇಂದ್ರ ಸಚಿವ ಹರ್ದೀಪ್  ಎಸ್ . ಪುರಿ  

Posted On: 02 OCT 2023 2:31PM by PIB Bengaluru

ವಸತಿ ಮತ್ತು ನಗರ ವ್ಯವಹಾರಗಳು ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 154 ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಅವರು ಇಂದು ರಾಜ್ ಘಾಟ್ ನಲ್ಲಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸಲು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನ್ ಕರ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ಸೇರಿಕೊಂಡರು.



 


ಗಾಂಧಿ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸಲು, ಶ್ರೀ ಹರ್ದೀಪ್ ಪುರಿ ಮತ್ತು ಅವರ ಪತ್ನಿ ಶ್ರೀಮತಿ ಲಕ್ಷ್ಮಿ ಎಂ. ಪುರಿ, ಖಾದಿ ಇಂಡಿಯಾದಿಂದ ಖಾದಿ ಬಟ್ಟೆಗಳನ್ನು ಖರೀದಿಸಿದರು. ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ಹಂಚಿಕೊಂಡಿರುವ ಸಚಿವರು, "ಭಾರತದ ಸ್ವಾತಂತ್ರ್ಯ ಹೋರಾಟದ ಆತ್ಮವಾಗಿ ಪ್ರಾರಂಭವಾದ ಖಾದಿ, ಭಾರತವು #AmritKaal ಮೂಲಕ ಪ್ರಯಾಣಿಸುತ್ತಿರುವಾಗ ನಾಗರಿಕರ ಕಲ್ಪನೆಯನ್ನು ಸೆರೆಹಿಡಿಯುತ್ತಿದೆ" ಎಂದು ಹೇಳಿದರು.

ಮಾಜಿ ಪ್ರಧಾನಿ ಮತ್ತು ಭಾರತ ರತ್ನ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯಂದು ಸಚಿವರು ಅವರಿಗೆ ಗೌರವ ನಮನ ಸಲ್ಲಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಅವರು, " ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಮಾಜಿ ಪ್ರಧಾನಿ, ಭಾರತ ರತ್ನ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಆದರ್ಶಪ್ರಾಯ ವ್ಯಕ್ತಿ, ಅವರ ಸರಳ ಮತ್ತು ಕಠಿಣ ಜೀವನವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ,’’ಎಂದು ಹೇಳಿದರು.

 


(Release ID: 1963312) Visitor Counter : 86


Read this release in: English , Urdu , Hindi