ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಪುರುಷರ ಬ್ಯಾಡ್ಮಿಂಟನ್ ತಂಡಕ್ಕೆ ಪ್ರಧಾನ ಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 01 OCT 2023 8:44PM by PIB Bengaluru

ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.

ಅವರ ಅಸಾಧಾರಣ ತಂಡ ಕೆಲಸ, ಕೌಶಲ್ಯ ಮತ್ತು ದೃಢನಿಶ್ಚಯವನ್ನು ಅವರು ಶ್ಲಾಘಿಸಿದ್ದಾರೆ ಮತ್ತು ಅವರು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:

"ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ನಮ್ಮ ಪುರುಷರ ಬ್ಯಾಡ್ಮಿಂಟನ್ ತಂಡಕ್ಕೆ ಅಭಿನಂದನೆಗಳು.

@srikidambi, @PRANNOYHSPRI, @lakshya_sen, @satwiksairaj, @Shettychirag04, @ManjunathMithun, @dhruvkapilaa, @SaiPratheek12, @arjunmr, @RohanKa43345391 ಅವರಿಗೆ ಅಭಿನಂದನೆಗಳು.

ಅವರ ಅಸಾಧಾರಣ ತಂಡ ಕೆಲಸ, ಕೌಶಲ್ಯಗಳು ಮತ್ತು ದೃಢನಿಶ್ಚಯವು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ” ಎಂದವರು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1963657) ವಿಸಿಟರ್ ಕೌಂಟರ್ : 114