ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಜನ್ಮದಿನದಂದು ಪ್ರಧಾನಮಂತ್ರಿಯವರು ಅವರಿಗೆ ಶುಭ ಹಾರೈಸಿದ್ದಾರೆ

Posted On: 01 OCT 2023 9:58AM by PIB Bengaluru

ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"ಮಾಜಿ ರಾಷ್ಟ್ರಪತಿ ಶ್ರೀ @ರಾಮನಾಥಕೋವಿಂದ್ ಜಿ ( @ramnathkovind ) ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರ ಆದರ್ಶಪ್ರಾಯ ನಾಯಕತ್ವ ಮತ್ತು ರಾಷ್ಟ್ರಕ್ಕೆ ಅವರ ಸಮರ್ಪಣೆ ಅಳಿಸಲಾಗದ ಛಾಪು ಮೂಡಿಸಿದೆ. ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ಅನುರಣಿಸಿ ಜನರಲ್ಲಿ ಪ್ರೇರೇಪಿಸುತ್ತದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ."

***


(Release ID: 1963687) Visitor Counter : 91